ಬೆಂಗಳೂರು;ಸಿಎಂ ಬರ ಪರಿಹಾರದ(Drought Relief) ಹಣವನ್ನು ಪಡೆಯಲು ರೈತರು ತಮ್ಮ ಖಾತೆಯೊಂದಿಗೆ ಆಧಾರ್ ಕಾರ್ಡ್ ಜೋಡಣೆ(Aadhaar card Link) ಮಾಡಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿ ತಿಳಿಸಿದ್ದಾರೆ, ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂಪಾಯಿ ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಲಿಂಕ್(Link) ಆಗದ ರೈತರು ತಕ್ಷಣ ಮಾಡಿಸಬೇಕು’ ಎಂದಿದ್ದಾರೆ.ವಿಪಕ್ಷಗಳ ಟೀಕೆ ಬೆನ್ನಲ್ಲೇ ಬರ ಪರಿಹಾರ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದ್ದಾರೆ.ಈ ಬಗ್ಗೆ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ.ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಎಂಬುದಾಗಿ ತಿಳಿಸಿದ್ದಾರೆ.