ಬೆಂಗಳೂರು ಜು.14 : ಗೃಹಲಕ್ಷ್ಮಿ ಯೋಜನೆಗೆ ಆಧಾರ್ ಕಡ್ಡಾಯವಲ್ಲ, ಮನೆ ಮಾಲೀಕರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದಿದ್ದರೂ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ. ನೆರವು ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 22 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳು ಆಧಾರ್‌ನೊಂದಿಗೆ ಲಿಂಕ್ ಆಗಿಲ್ಲ ಎಂಬ ಅಂಶ ಬಹಿರಂಗವಾಗಿದೆ.
ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಾಹಿತಿ ಬಂದಿದ್ದು, ಸಭೆಯಲ್ಲಿ ಚರ್ಚೆ ಬಳಿಕ ಆಧಾರ್ ಇಲ್ಲದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎನ್ನಲಾಗಿದೆ.