26.4 C
Bengaluru
Monday, December 23, 2024

ರಾಜ್ಯ ಬಜೆಟ್: ಒಂದು ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆ ಘೊಷಣೆ

ಬೆಂಗಳೂರು, ಫೆ. 17 : ಈ ಭಾರಿಯ ರಾಜ್ಯ ಬಜೆಟ್‌ ನಲ್ಲಿ ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ನೀಡದಷ್ಟು ಮೊತ್ತವನ್ನು ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದೇ ಮೊದಲ ಬಾರಿಗೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಕರ್ನಾಟಕ ರಾಜ್ಯ ಸರ್ಕಾರ ದೊಡ್ಡ ಮೊತ್ತದ ವಿಮಾ ಯೋಜನೆಯನ್ನು ಘೋಷಿಸಿದೆ. ರಾಜ್ಯ ಸರ್ಕಾರದ ವತಿಯಿಂದ 1 ಕೋಟಿ ರೂಪಾಯಿ ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯವನ್ನು ಜಾರಿಗೆ ತರಲಾಗಿದೆ. ಇನ್ನು ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡಲು ಚಾರ್ಜಿಂಗ್ ಸ್ಟೇಷನ್ ಸ್ಥಾಪಿಸಲಾಗುವುದು. ಇದರೊಂದಿಗೆ ಹೊಸ ವಿದ್ಯುತ್ ಬಸ್ ಖರೀದಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ.

ವಾಯುಮಾಲಿನ್ಯ ನಿಯಂತ್ರಣಕ್ಕೆ ತರುವ ದೃಷ್ಟಿಯಿಂದ ಸಾರಿಗೆ ನಿಗಮಗಳಲ್ಲಿ ಈಗಾಗಲೇ ವಿದ್ಯುತ್ ಚಾಲಿತ ಬಸ್ಸುಗಳನ್ನು ಅಳವಡಿಸಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 1311 ಬಸ್ಸುಗಳು ಕಾರ್ಯಾಚರಣೆ ಪ್ರಾರಂಬಿಸಿವೆ. ಇನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 50 ಬಸ್ಸುಗಳ ಕಾರ್ಯಾಚರಣೆ ನಡೆಸುತ್ತಿವೆ. ಮುಂದಿನ ವರ್ಷದಲ್ಲಿ ವಿದ್ಯುತ್ ಚಾಲಿತ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಲು ಮುಂದಾಗಿದೆ. ಈ ಮೂಲಕ ವಾಯುಮಾಲಿನ್ಯವನ್ನು ಕಡಿಮೆಗೊಳಿಸಲು ಹಸಿರು ತೆರಿಗೆ ನಿಧಿಯ ಅನುದಾನದಡಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ 2022-23ನೇ ಸಾಲಿನಲ್ಲಿ 2,335 ಕೋಟಿ ರೂಪಾಯಿಗಳ ಮೊತ್ತದ ಆರ್ಥಿಕ ಸಹಾಯವನ್ನು ಒದಗಿಸಲಾಗಿದೆ. ಇದಲ್ಲದೇ 1,505 ಕೋಟಿ ರೂ. ಮೊತ್ತದಲ್ಲಿ ವಾಹನ ತೆರಿಗೆಯಿಂದ ವಿನಾಯಿತಿ ಹಾಗೂ ತೆರಿಗೆಯನ್ನು ಬಂಡವಾಳವಾಗಿ ಪರಿವರ್ತಿಸಿಕೊಳ್ಳಲು ಮತ್ತು ಉಳಿಸಿಕೊಳ್ಳಲು ವಿಶೇಷ ಅವಕಾಶವನ್ನು ಮಾಡಿಕೊಡಲಾಗಿರುತ್ತದೆ. ಒಟ್ಟಾರೆಯಾಗಿ 3,840 ಕೋಟಿ ರೂ. ಗಳ ಸಹಾಯವನ್ನು ಒದಗಿಸಲಾಗಿರುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

2022-23ನೇ ಸಾಲಿನಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು 3,526 ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿಕೊಳ್ಳಲು ಕ್ರಮ ವಹಿಸಲಾಗಿರುತ್ತದೆ. 2023- 24ನೇ ಸಾಲಿನಲ್ಲಿ 1,200 ಹೊಸ ಬಸ್ಸುಗಳನ್ನು ಸಂಸ್ಥೆಗಳಿಗೆ ಸೇರ್ಪಡೆ ಮಾಡಲು ರಾಜ್ಯ ಸರ್ಕಾರದಿಂದ ಕೋಟಿ ರೂ. ಆರ್ಥಿಕ ಸಹಾಯವನ್ನು ಒದಗಿಸಲಾಗುವುದು. ಪ್ರಪ್ರಥಮ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಸಾರಿಗೆ ಸಂಸ್ಥೆಗಳಿಗೆ ಹೊಸ ಬಸ್ ಖರೀದಿಗಾಗಿ ಸರ್ಕಾರದಿಂದ ನೆರವು ನೀಡಲಾಗುತ್ತಿದೆ. ಎಂದು ಸಿಎಂ ಹೇಳಿಕೊಂಡಿದ್ದಾರೆ.

Related News

spot_img

Revenue Alerts

spot_img

News

spot_img