21.1 C
Bengaluru
Monday, December 23, 2024

ಮತದಾರರ ಪಟ್ಟಿ ಸೇರ್ಪಡೆ;ಇಂದಿನಿಂದ ನೋಂದಣಿ ಅಭಿಯಾನ

#Addition # voter #list #Registration #campaign # today

ಬೆಂಗಳೂರು:ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ(electoral roll) ಸೇರ್ಪಡೆಯಾಗುವ ನಿಟ್ಟಿನಲ್ಲಿ ಡಿ.2, 3ರಂದು ಎರಡು ದಿನಗಳ ಕಾಲ ನಗರದಾದ್ಯಂತ ವಿಶೇಷ ನೋಂದಣಿ ಅಭಿಯಾನವನ್ನು(Special Registration Campaign) ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಚುನಾವಣಾಧಿಕಾರಿಗಳು-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ: 27.10.2023 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 27.10.2023 ರಿಂದ 09.12.2023 ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ.ಜಿಲ್ಲಾ ಚುನಾವಣಾಧಿಕಾರಿಗಳು- ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅ.27ರಂದು ಕರಡು ಮತದಾರರ ಪ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಹಕ್ಕು ಮತ್ತು ಸೆಹ ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9ರವರೆಗೆ ಅವಕಾಶ ನೀಡಲಾಗಿದೆ.ವಿಶೇಷ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿಯ ಎಲ್ಲಾ ಕಂದಾಯ ಅಧಿಕಾರಿಗಳು / ಸಹ ಕಂದಾಯ ಅಧಿಕಾರಿಗಳು / ವಾರ್ಡ್ ಕಛೇರಿಗಳು / ಮತಗಟ್ಟೆಗಳಲ್ಲಿ ಆಯೋಜಿಸಲಾಗಿರುತ್ತದೆ. ಬೂತ್ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು, ನೋಂದಣಿ ಮಾಡಿಕೊಳ್ಳುವುದರ ಜೊತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸಹ ಸ್ವೀಕರಿಸಲಿದ್ದಾರೆ.ಮತದಾರರು ಈ ವಿಶೇಷ ನೋಂದಣಿ ಅಭಿಯಾನದ ಸದುಪಯೋಗವನ್ನು ಪಡೆ ದುಕೊಳ್ಳಬಹುದು. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಕುರಿತು ಪಟ್ಟಿಯಲ್ಲಿ ಹೊಸದಾಗಿ ಮತದಾರರ ಹೆಸರು ಸೇರ್ಪಡೆಗೊಳಿಸಲು, ನಮೂನೆ-7: ಮತದಾರರ ಪಟ್ಟಿ ಕುರಿತ ಆಕ್ಷೇಪಣೆ ಹಾಗೂ ನಮೂನೆ-8: ಮತದಾರರ ಚೀಟಿಯಲ್ಲಿನ ಬದಲಾವಣೆಗಾಗಿ) ಸಂಬಂಧಿಸಿದ ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಅಥವಾ ಆನ್‌ಲೈನ್ ಮುಖಾಂತರ ಸ್ವಯಂ ಪ್ರೇರಿತವಾಗಿ Web Portal:- voters.eci.gov.in CxÀ Á Voter Helpline Mobile App ನೋಂದಾಯಿಸಿಕೊಳ್ಳಬಹುದಾಗಿದೆ.ವಿಶೇಷ ನೋಂದಣಿ ಅಭಿಯಾನದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹೊಸ ಮತದಾರರ ನೋಂದಣಿ ಮಾಡಿಕೊಳ್ಳುತ್ತಾರೆ. ಜತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ(Bangalore District Election Officer) ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

Related News

spot_img

Revenue Alerts

spot_img

News

spot_img