#Agriculture #CID #CM siddramyya #bribe #CID
ಬೆಂಗಳೂರು : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಲಂಚ ಬೇಡಿಕೆ ಇಟ್ಟಿದರು ಎಂದು ಆರೋಪಿಸಿ ಅಧಿಕಾರಿಗಳು ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.ಮಂಡ್ಯದ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆನ್ನಲಾದ ಪತ್ರವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವರ ಜೊತೆ ಸಮಾಲೋಚನೆ ನಡೆಸಿ, ಸುಧೀರ್ಘ ಚರ್ಚೆ ಬಳಿಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಂಡ್ಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರಿಗೆ ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆʼ ಎಂದು ಹೇಳಿದರು.ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೆಲಸ ನಿಲ್ಲಿಸಿಲ್ಲ. ತನಿಖೆಯಾಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎ ನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.ತಿಳಿಸಿದರು.