22.9 C
Bengaluru
Saturday, July 6, 2024

ಉತ್ತರ ಪ್ರದೇಶದ ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

#Allahabad High Court’s # landmark verdict # survey # Shahi Eidga Masjid # Mathura # Uttar Pradesh

ನವದೆಹಲಿ;ಉತ್ತರ ಪ್ರದೇಶದ ಮಥುರಾದ ಶ್ರೀಕೃಷ್ಣ ಜನ್ಮಭೂಮಿಯ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್(Highcourt) ಇಂದು ಗುರುವಾರ (ಡಿ.14) ಅನುಮತಿ ನೀಡಿದ್ದು, ಆಯುಕ್ತರನ್ನು ನೇಮಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ದೇವಸ್ಥಾನಕ್ಕೆ ಶಾಹಿ ಈದ್ದಾ(Shahi edga) ಮೈದಾನವೂ ಹೊಂದಿಕೊಂಡಿದ್ದು, ಈ ಜಾಗ ವಿವಾದಕ್ಕೆ ಕಾರಣವಾಗಿದೆ. ಮಸೀದಿ ಇರುವ ಸ್ಥಳವು ದೇವಸ್ಥಾನಕ್ಕೆ ಸಂಬಂಧಿಸಿದ್ದು ಎಂದು ಆರೋಪಿಸಿ ಹಲವು ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ್ದ ಕೋರ್ಟ್, ಮೇಲಿನಂತೆ ತೀರ್ಪಿತ್ತಿದೆ.ಹೈದರಾಬಾದ್‌ ಸಂಸದ ಅಸಾದುದ್ದೀನ್‌ ಓವೈಸಿ(OYC) ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದು, ಮುಸ್ಲಿಮರ ಘನತೆಯನ್ನು ಕಸಿಯುವುದು ಮಾತ್ರವೇ ಈಗಿನ ಗುರಿತಯಾಗಿರುವಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.ಮಸೀದಿಯನ್ನು ಖಾಲಿ ಜಾಗದಲ್ಲಿ ನಿರ್ಮಿಸಿದ್ದು, ಸಮೀಕ್ಷೆಗೆ ಅವಕಾಶ ನೀಡಬಾರದು ಎಂಬ ಈದ್ಗಾ ಸಮಿತಿ ಮತ್ತು ವಕ್ಫ್‌ ಬೋರ್ಡ್‌ ನ ವಾದವನ್ನು ಹೈಕೋರ್ಟ್‌ ತಳ್ಳಿಹಾಕಿದೆ.ಭಗವಾನ್‌ ಶ್ರೀಕೃಷ್ಣನ ದೇವಾಲಯವನ್ನು ನಾಶಗೊಳಿಸಿ, ಆ ಜಾಗದಲ್ಲಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ. ಮಥುರಾ(Mathura) ಶ್ರೀಕೃಷ್ಣನ ಜನ್ಮಸ್ಥಳವಾಗಿದೆ ಎಂದು ಹಿಂದು ಪರ ಕಕ್ಷಿದಾರರು ಪ್ರತಿಪಾದಿಸಿದ್ದಾರೆ.ಮಥುರಾದಲ್ಲಿ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕೆಂಬ ಅರ್ಜಿಯನ್ನು ಜಿಲ್ಲಾ ಕೋರ್ಟ್‌ ವಜಾಗೊಳಿಸಿತ್ತು. 1991ರ ಪೂಜಾ ಸ್ಥಳ ಮತ್ತು 1947ರ ಆಗಸ್ಟ್‌ 15ರ ಯಾವುದೇ ಧಾರ್ಮಿಕ ಪೂಜಾ ಸ್ಥಳದಲ್ಲಿ ಯಾವುದೇ ಬದಲಾವಣೆಗೆ ಅವಕಾಶ ಇಲ್ಲ ಎಂಬ ಕಾಯ್ದೆಯನ್ವಯ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು.

Related News

spot_img

Revenue Alerts

spot_img

News

spot_img