ಬೆಂಗಳೂರು;ಇಂದು(ಮೇ 31) ಕರ್ನಾಟಕದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಕುರಿತು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ ಎನ್ನಲಾಗಿದೆ.
ತುಮಕೂರು ಲೋಕಾಯುಕ್ತ ದಾಳಿ
ತುಮಕೂರಿನಲ್ಲಿ ಲೋಕಾಯುಕ್ತ ಪೊಲೀಸರು ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ದಾಳಿ ನಡೆಸಿದ್ದಾರೆ,ತುಮಕೂರಿನಲ್ಲಿ ಲೋಕಾಯುಕ್ತ ಪೊಲೀಸರು ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ದಾಳಿ ನಡೆಸಿದ್ದಾರೆ.ಬೆಂಗಳೂರು ನಗರದಲ್ಲಿಯೂ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ
ಇನ್ನು ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿಯಾಗಿದೆ. ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೇಟ್ಟರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಣೆಬೆನ್ನೂರು ನಗರದ ನಿವಾಸ ಹಾಗೂ ಹಾವೇರಿಯ ದೇವಗರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬೀದರ್ ಲೋಕಾಯುಕ್ತ ದಾಳಿ
ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಡಿವೈಎಸ್ಪಿ ಓಲೆಕಾರ ನೇತೃತ್ವದಲ್ಲಿ ದಾಳಿ ದಾಳಿಯಾಗಿದೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ನಲ್ಲೂ ಪರಿಶೀಲನೆ ನಡೆಸಿದ್ದಾರೆ.
ಕೊಪ್ಪಳ ಲೋಕಾಯುಕ್ತ ದಾಳಿ
ಅಪಾರ ಆಸ್ತಿಗಳಿಸಿದ ಆರೋಪದ ಮೇಲೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ.ಕೊಪ್ಪಳದ ಕೆಆರ್ ಐಡಿಲ್ ಇಂಜಿನೀಯರ್ ಶರಣಪ್ಪ ಚಿಂಚೋಳಿಕರ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರ್ ಲೋಕಾಯುಕ್ತ ದಾಳಿ
ಮೈಸೂರಿನ ನಿವೇದಿತಾ ನಗರದ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ದಾಳಿ ಆಗಿದೆ. ತೋಟದ ಮನೆ ಸೇರಿ ಹಲವು ಕಡೆ ಒಟ್ಟು 13 ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ಮಾಡಿದೆ.