Revenue Facts

ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ಅಧಿವೇಶನದಲ್ಲಿ ಎರಡು ದಿನ ಅವಕಾಶ- ಸಭಾಪತಿ ಹೊರಟ್ಟಿ

ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ಅಧಿವೇಶನದಲ್ಲಿ ಎರಡು ದಿನ ಅವಕಾಶ- ಸಭಾಪತಿ ಹೊರಟ್ಟಿ

ಹುಬ್ಬಳ್ಳಿ, ಡಿಸೆಂಬರ್‌ 24: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು ಇಡಲಾಗುತ್ತದೆ. ಈ ಭಾಗದ ಸಮಸ್ಯೆಗಳ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಕೆಲಸವನ್ನು ಮಾಡಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಳಿಗಾಲದ ಅಧಿವೇಶನದಲ್ಲಿ ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಗಳಿಗೆ ಚರ್ಚೆಮೀಸಲು ಇಡಲಾಗುತ್ತದೆ. ಮಂಗಳವಾರ- ಬುಧವಾರ ಎರಡು ದಿನ ಉತ್ತರ ಕರ್ನಾಟಕದ ವಿಚಾರ ಚರ್ಚೆ ಮಾಡಲಾಗುತ್ತದೆ. ಸದನ ಆರಂಭವಾದ ತಕ್ಷಣ ಚರ್ಚೆಗೆ ಸಂಬಂಧಿಸಿದ ಸಚಿವರು ಇರಬೇಕು. ಅವರು ಇರಲಿಲ್ಲ ಎಂದರೆ ಮುಖ್ಯಮಂತ್ರಿಗಳಿಗೆ ಉತ್ತರಿಸಲು ಸೂಚಿಸುತ್ತೇನೆ ಎಂದು ಹೇಳಿದರು.

ಕನಿಷ್ಟ 15 ದಿನವಾದರೂ ಚಳಿಗಾಲದ ಅಧಿವೇಶನ ನಡೆಸಬೇಕು. ಸರ್ಕಾರ ಈ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಅನಗತ್ಯ ಗದ್ದಲ ಹಾಗೂ ಗಲಾಟೆಗೆ ಕಾಲಹರಣಕ್ಕೆ ಅವಕಾಶ ಕೊಡುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

Exit mobile version