22.9 C
Bengaluru
Friday, July 5, 2024

ಅಮಿತಾಬ್ ಬಚ್ಚನ್ ,ವಿರಾಟ್ ಕೊಹ್ಲಿ, ಶಾರುಖ್ ಖಾನ್, ಸೇರಿ ಹಲವರ ಟ್ವಿಟ್ಟರ್​ ಖಾತೆಯಲ್ಲಿ ಮಾಯವಾದ ಬ್ಲ್ಯೂ ಟಿಕ್!

ಮೈಕ್ರೋಬ್ಲಾಗಿಂಗ್ ಪ್ಲ್ಯಾಟ್ಫಾರ್ಮ್ (Micro-blogging site) ಟ್ವಿಟರ್ ತನ್ನ ಪ್ರೀಮಿಯಮ್ ಸಬ್ಸ್ಕ್ರಿಪ್ಶನ್ ಸೇವೆಯಾದ ಟ್ವಿಟರ್ ಬ್ಲ್ಯೂಟಿಕ್ ಅನ್ನು ಭಾರತದ ಟ್ವಿಟರ್ ಬಳಕೆದಾರರಿಗೆ ಈಗಾಗಲೇ ಬಿಡುಗಡೆ ಮಾಡಿದ್ದು, ಅದರಂತೆ ಪಾವತಿ ಮಾಡದ ಟ್ವಿಟ್ಟರ್ ಖಾತೆಯಿಂದ ಬ್ಲ್ಯೂ ಟಿಕ್ ತೆಗೆದು ಹಾಕಲಾಗಿದೆ.

ಮೈಕ್ರೋಬ್ಲಾಗಿಂಗ್ ಪ್ಲ್ಯಾಟ್ಫಾರ್ಮ್ ಟ್ವಿಟರ್ ತನ್ನ ಪ್ರೀಮಿಯಮ್ ಸಬ್ಸ್ಕ್ರಿಪ್ಶನ್ ಸೇವೆಯಾದ ಟ್ವಿಟರ್ ಬ್ಲ್ಯೂಟಿಕ್ ಅನ್ನು ಭಾರತದ ಟ್ವಿಟರ್ ಬಳಕೆದಾರರಿಗೆ ಈಗಾಗಲೇ ಬಿಡುಗಡೆ ಮಾಡಿದ್ದು, ಅದರಂತೆ ಪಾವತಿ ಮಾಡದ ಟ್ವಿಟ್ಟರ್ ಖಾತೆಯಿಂದ ಬ್ಲ್ಯೂ ಟಿಕ್ ತೆಗೆದು ಹಾಕಲಾಗಿದೆ.

ಇದರಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟ ಶಾರುಖ್ ಖಾನ್ ಸೇರಿದಂತೆ ಹಲವು ಪ್ರಮುಖರ ಬ್ಲ್ಯೂಟಿಕ್​ ಮಾರ್ಕ್ ಗಳು ಮಾಯವಾಗಿರುವುದು ಕಂಡು ಬಂದಿದೆ. ಇದಲ್ಲದೆ, ಭಾರತದ ಹಿರಿಯ ಬಿಲಿಯನೇರ್ ರತನ್ ಟಾಟಾ, ಮಹೀಂದ್ರಾ ಮತ್ತು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರ ಮತ್ತು ಗೌತಮ್ ಅದಾನಿ ಅವರ ಬ್ಲೂ ಟಿಕ್ ಅನ್ನು ತೆಗೆದುಹಾಕಲಾಗಿದೆ.

ಟ್ವಿಟರ್ ಬ್ಲ್ಯೂವನ್ನು ಆಯಂಡ್ರಾಯ್ಡ್ ಹಾಗೂ ಐಓಎಸ್ ಡಿವೈಸ್ ಎರಡರಲ್ಲೂ ಬಳಸಬಹುದಾಗಿದೆ ಜೊತೆಗೆ ಟ್ವಿಟರ್ ವೆಬ್ಸೈಟ್ ಬಳಸುವವರು ಕೂಡ ಬ್ಲ್ಯೂ ಚೆಕ್ಮಾರ್ಕ್ ಅನ್ನು ಖರೀದಿಸಬಹುದು. ಐಓಎಸ್ ಹಾಗೂ ಆಯಂಡ್ರಾಯ್ಡ್ ಬಳಕೆದಾರರಿಗೆ ಬ್ಲ್ಯೂ ಟಿಕ್ಮಾರ್ಕ್ ಮಾಸಿಕ ಸಬ್ಸ್ಕ್ರಿಪ್ಶನ್ ಶುಲ್ಕ ರೂ 900 ಆಗಿದ್ದರೆ ವೆಬ್ ಬಳಕೆದಾರರಿಗೆ ಈ ಶುಲ್ಕ ರೂ 650 ಇರಲಿದೆ.

Related News

spot_img

Revenue Alerts

spot_img

News

spot_img