26.4 C
Bengaluru
Monday, December 23, 2024

ಅನ್ನಭಾಗ್ಯ, ಗೃಹಲಕ್ಷ್ಮೀಯ ಎಲ್ಲಾ ಫಲಾನುಭವಿಗಳಿಗೆ ಸಿಹಿ ಸುದ್ದಿ ಹೊರಡಿಸಿದ ಸರ್ಕಾರ

ಬೆಂಗಳೂರು : ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ವಿವಿಧ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ನಿಗಧಿತ ಅವಧಿಯೊಳಗೆ ಯೋಜನೆ ಹಣ ಖಾತೆಗೆ ಜಮಾ ಆಗಲಿದೆ.ಶೇ. 30 ರಷ್ಟು ಅರ್ಹರಿಗೆ ಅನ್ನ ಭಾಗ್ಯ(Annabhagya) ಯೋಜನೆಯ ಹಣವಾಗಲಿ, ಗೃಹ ಜ್ಯೋತಿ(Gruhajyothi) ಹಣವಾಗಲಿ ಖಾತೆಗೆ ಜಮಾ ಆಗಿಲ್ಲ. ಈ ಬಗೆ ಸರ್ಕಾರ ಅನೇಕ ಅಪ್ಡೇಟ್(Update) ನೀಡುತ್ತಿದ್ದರು ಈ ಕೂಡ ಅರ್ಹರು ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎನ್ನುವುದು ಸದ್ಯದ ಚಿಂತೆಯಾಗಿದೆ. ಇದೀಗ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆ ಹಾಗೂ ಗೃಹ ಲಕ್ಷ್ಮಿ(gruhalakshmi) ಯೋಜನೆಯಿಂದ ವಂಚಿತರಾದವರಿಗೆ ಸಿಹಿಸುದ್ದಿ ನೀಡಿದೆ. ಈ ಬಾರಿ ಯೋಜನೆಯ ಹಣ ಕಡ್ಡಾಯವಾಗಿ ಜಮಾ ಆಗಲಿದೆ ಎಂದು ಸರ್ಕಾರ ಹೇಳಿಕೆ ನೀಡಿದೆ.

ಫಲಾನುಭವಿಗಳಿಗೆ ಪಾವತಿಗಳನ್ನು ವೇಗಗೊಳಿಸಲು ಮತ್ತು DDO, DBT ಸಲ್ ಮತ್ತು ಖಜಾನೆಗಳೊಂದಿಗೆ ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ಹಂತ ಹಂತದ ಪಾವತಿಯನ್ನು ಸುಲಭಗೊಳಿಸಲು, ಗೃಹ ಲಕ್ಷ್ಮಿ, ಅನ್ನ ಭಾಗ್ಯ ಮತ್ತು ಹೆಚ್ಚಿನ ಸಂಖ್ಯೆಯ ಫಲಾನುಭವಿಗಳೊಂದಿಗೆ ಸಾಮಾಜಿಕ ಭದ್ರತಾ ಪಿಂಚಣಿ(Social Security Pension) ಯೋಜನೆಗಳಿಗೆ ನಿಗದಿತ ಸಮಯದೊಳಗೆ ವೇಳಾಪಟ್ಟಿಯೊಂದಿಗೆ ನಿರ್ಧಿಷ್ಟ ವೇಳೆಯೊಳಗೆ ಹಣವನ್ನ ಜಮಾ ಮಾಡಲು ಆದೇಶವನ್ನ ಹೊರಡಿಸಲಾಗಿದೆ.ಎಲ್ಲಾ ಸರ್ಕಾರಿ ಇಲಾಖೆಗಳ ಫಲಾನುಭವಿ ಆಧಾರಿತ ಕಲ್ಯಾಣ ಮತ್ತು ಸಬ್ಸಿಡಿ ಸ್ಟ್ರೀಮ್‌ಗಳ ಪಾವತಿಯ ನೇರ ಲಾಭ ವರ್ಗಾವಣೆ ವ್ಯವಸ್ಥೆಯ ಮೂಲಕ ಯಾವುದೇ ಅಡೆತಡೆಯಿಲ್ಲದೆ ಡಿಬಿಟಿ ಮತ್ತು ಖಜಾನೆ 2 ಮೂಲಕ ಫಲಾನುಭವಿಗಳ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಗಳಿಗೆ ಹಣವನ್ನು ಪಾವತಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.ಸರ್ಕಾರದ ಸುತ್ತೋಲೆ ಸಂ:ಆಇ 37 ಟಿಎಅರ್ 2021, ದಿ:26.07.2021 ರಲ್ಲಿ ಎಲ್ಲಾ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಫಲಾನುಭವಿ ಆಧಾರಿತ ಯೋಜನೆಗಳಿಗೆ ಸಂಬಂಧಿಸಿದಂತೆ ಸಿ.ಆ.ಸು. (ಇ-ಆಡಳಿತ) ಇಲಾಖೆಯೊಂದಿಗೆ ಸರ್ಕಾರದ ಏಕೀಕೃತ ನೇರ ನಗದು ವರ್ಗಾವಣೆ ವೇದಿಕ (DBT Platform) ಮೂಲಕ ಅನುಷ್ಠಾನಗೊಳಿಸಲು ತಿಳಿಸಲಾಗಿದೆ.ಖಜಾನೆ ಆಯುಕ್ತರ ಪ್ರಸ್ತಾವನೆಯಲ್ಲಿ, ಸರ್ಕಾರದ ಎಲ್ಲಾ ಇಲಾಖೆಗಳ ಫಲಾನುಭವಿ ಆಧಾರಿತ ಕಲ್ಯಾಣ ಹಾಗೂ ಸಬ್ಸಿಡಿ ಸ್ಟ್ರೀಂಗಳ ಪಾವತಿಗಳನ್ನು ನೇರ ವರ್ಗಾವಣೆ ಮಾಡುವ ವ್ಯವಸ್ಥೆ (Direct Benefit Transfer) ಮುಖಾಂತರ ಫಲಾನುಭವಿಗಳ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮತ್ತು ಖಜಾನೆ-2 ರ ಮೂಲಕ ಹಣವನ್ನು ಯಾವುದೇ ಅಡೆ ತಡೆಗಳಿಲ್ಲದೇ ಪಾವತಿಸಲಾಗುತ್ತಿದೆ ಎಂದು ತಿಳಿಸಿರುತ್ತಾರೆ.

 

 

Related News

spot_img

Revenue Alerts

spot_img

News

spot_img