ಬೆಂಗಳೂರು: ಅನ್ನಭಾಗ್ಯದ ಹೆಚ್ಚುವರಿ ಅಕ್ಕಿಬದಲಿಗೆ 170 ರೂ. ಹಣವನ್ನುನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದ್ದುಇಂದು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ.ಇಂದು ಸಂಜೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಯೋಜನೆಗೆ ಚಾಲನೆ ಸಿಗಲಿದೆ. ಡಿಬಿಟಿ ಮೂಲಕ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 170 ರೂ.ನಂತೆ ಹಣ, ಕುಟುಂಬದ ಮುಖ್ಯಸ್ಥನ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ.ಇದು ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ 3ನೇ ಗ್ಯಾರಂಟಿ ಯೋಜನೆಯಾಗಿದೆ.ಕರ್ನಾಟಕ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿ ನೇರ ಬ್ಯಾಂಕ್ ವರ್ಗಾವಣೆ ಸೋಮವಾರ ಸಂಜೆ ಪ್ರಾರಂಭವಾಗಲಿದೆ ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಶನಿವಾರ ತಿಳಿಸಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಒಟ್ಟು 1,28,16,253 ಮಂದಿ ಫಲಾನುಭವಿಗಳಿದ್ದು ಈ ಪೈಕಿ ಶೇಕಡಾ 82% ಮಂದಿ ತಕ್ಷಣ ಯೋಜನೆ ಪಡೆಯಲು ಅರ್ಹರಾಗಿದ್ದಾರೆ ಎನ್ನಲಾಗಿದೆ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ್ದರೆ ಮಾತ್ರವೇ ಹಣ ವರ್ಗಾವಣೆ ಆಗುವುದಾಗಿ ಹೇಳಲಾಗಿದೆ.ಹಣಕಾಸು ಸಚಿವರೂ ಆಗಿರುವ ಸಿಎಂ, 2023-24ನೇ ಹಣಕಾಸು ವರ್ಷಕ್ಕೆ ಬಜೆಟ್‌ನಲ್ಲಿ ತಿಂಗಳಿಗೆ 856.25 ಕೋಟಿ ರೂ.ನಂತೆ 10,275 ಕೋಟಿ ರೂ. ಹಣ ಮೀಸಲಿಟ್ಟಿದ್ದಾರೆ. ಪ್ರತಿ ತಿಂಗಳು 10 ಕೆ.ಜಿ. ಅಕ್ಕಿ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಅಕ್ಕಿ ಲಭ್ಯವಾಗಲಿಲ್ಲ, ಕೇಂದ್ರದ ಬಳಿಯೂ ಸರ್ಕಾರ ಅಕ್ಕಿ ನೀಡುವಂತೆ ಕೋರಿತ್ತು. ಇದಕ್ಕೆ ಕೇಂದ್ರ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಸೂಕ್ತ ಪ್ರಮಾಣದ ಅಕ್ಕಿ ಲಭ್ಯವಾಗುವವರೆಗೆ ಗ್ರಾಹಕರ ಖಾತೆಗೆ 5 ಕೆ.ಜಿ. ಅಕ್ಕಿಯಷ್ಟು ಹಣವನ್ನು ಜಮೆ ಮಾಡುವುದಾಗಿ ಪ್ರಕಟಿಸಿತ್ತು.