ಬೆಂಗಳೂರು ಜುಲೈ 04: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡುವ ಕುರಿತು ಮಹತ್ವದ ಆದೇಶದ ಪುಸ್ತಾವನೆಯಲ್ಲಿ, ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರು ಗೌರವಾನ್ವಿತ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:14.06.2023 ರಂದು ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಈ ಆದೇಶವು ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ ಟಿಡಿ 27 ಟಿಡಿಓ 2023, ದಿನಾಂಕ:02.02.2023 2. ಸರ್ಕಾರದ ಆದೇಶ ಸಂಖ್ಯೆ ಟಿಡಿ 27 ಟಿಡಿಓ 2023, ದಿನಾಂಕ:03.03.2023ನಗೌರವಾನ್ವಿತ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಗಳು,ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇವರ ಪುಸ್ತಾವನೆ ಸಂಖ್ಯೆ: ಸಾಆ/ಪುವರ್ತನ-3/ ವೈ.ವ-29/2022-23, ದಿನಾಂಕ: 20.06.2023. ರಲ್ಲಿ ಆದೇಶಿಸಲಾಗಿದೆ.
ಮೇಲೆ ಓದಲಾದ ಕ್ರಮ ಸಂಖ್ಯೆ:(1)ರ ಸರ್ಕಾರದ ಆದೇಶದಲ್ಲಿ, ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು. ಮೇಲೆ ಓದಲಾದ ಕ್ರಮ ಸಂಖ್ಯೆ.
ಸರ್ಕಾರದ ಆದೇಶದಲ್ಲಿ, ಗೌರವಾನ್ವಿತ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:14.06.2023 ರಂದು ನಡೆದ ಸಭೆಯ ನಡವಳಿಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ದಂಡದ ಮೊತ್ತಕ್ಕೆ ರಿಯಾಯಿತಿ ನೀಡಲು ಕ್ರಮಕೈಗೊಳ್ಳುವಂತೆ ಕೋರಲಾಗಿದೆ.
ಪುಸ್ತಾವನೆಯಲ್ಲಿ, ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರು ಗೌರವಾನ್ವಿತ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:14.06.2023 ರಂದು ನಡೆದ ಸಭೆಯ ನಿರ್ಣಯದಂತೆ, ದಿನಾಂಕ:11.02.2023ರೊಳಗಿನ ಪಕರಣಗಳಿಗೆ ಮಾತ್ರ ಅನ್ವಯಿಸುವಂತೆ ಪೊಲೀಸ್ ಇಲಾಖೆಯ ಸಂಚಾರಿ, ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ
ಪಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:08.07,2023ರವರೆಗೆ ಕಾಲಾವಕಾಶ ನೀಡಿ ಆದೇಶಹೂರಡಿಸುವಂತೆ ಕೋರಿರುತ್ತಾರೆ.
ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದ. ಸರ್ಕಾರದ ಆದೇಶ ಸಂಖ್ಯೆ: ಟಿಥಿ 27 ಟಿಡಿಓ 2023 ಬೆಂಗಳೂರು, ದಿನಾಂಕ:05.07,2023, ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ- ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ,
ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ ರಿಯಾಯಿತಿ ನೀಡಿ ಆದೇಶಿಸಿದೆ).
ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತು ಅನ್ವಯವಾಗುತ್ತದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ: ಆಇ 52 ವೆಚ್-11/2023 (E), ದಿನಾಂಕ:04,07.2023ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ.