ನವದೆಹಲಿ;ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಇಂದು ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕಕ್ಕೆ ಮತ್ತೊಮ್ಮೆ ಶಾಕ್ ನೀಡಿದೆ. ಕಾವೇರಿ ನೀರು ನಿಯಂತ್ರಣಾ ಮಂಡಳಿ ನೀಡಿರುವ ಆದೇಶದಂತೆ ಮುಂದಿನ ಅ.15ರವರೆಗೆ ತಮಿಳುನಾಡಿಗೆ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ್ದು, CWRC ಆದೇಶವನ್ನು ಎತ್ತಿಹಿಡಿದೆ. ಇದರೊಂದಿಗೆ ಕಾವೇರಿ ವಿಚಾರದಲ್ಲಿ 2 ಬಾರಿ ಹಿನ್ನಡೆ ಅನುಭವಿಸಿದ್ದ ಕನ್ನಡಿಗರಿಗೆ ಮತ್ತೊಮ್ಮೆ ಆಘಾತವಾಗಿದೆ.ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇದರ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆಯನ್ನು ಕರೆದಿತ್ತು.ಈ ಸಭೆಯಲ್ಲಿ CWRC ಆದೇಶ ಪಾಲಿಸುವಂತೆ CWMA ಕರ್ನಾಟಕ್ಕೆ ಸೂಚನೆ ನೀಡಿದೆ.ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ CWMA ನೀಡಿರುವ ಆದೇಶಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದಾರೆ. ಸಂಜೆ 6 ಗಂಟೆಯೊಳಗೆ ರಾಜ್ಯ ಸರ್ಕಾರ ತನ್ನ ನಿರ್ಧಾರ ತಿಳಿಸಬೇಕು ಎಂದು ಡೆಡ್-ಲೈನ್ ವಿಧಿಸಿರುವ ಮಂಡ್ಯ ಜಿಲ್ಲಾ ಕಾವೇರಿ ಹಿತ ರಕ್ಷಣಾ ಸಮಿತಿ ಸದಸ್ಯರು, ಇಲ್ಲವಾದರೆ ಹೋರಾಟದ ಚಿತ್ರಣವೇ ಬದಲಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. CWMA ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕಕ್ಕೆ ಮತ್ತೊಮ್ಮೆ ಬಿಗ್ ಶಾಕ್;ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ‘CWMA’ ಆದೇಶ
by RF Desk