22.4 C
Bengaluru
Saturday, June 15, 2024

ಎಪಿಎಲ್ – ಬಿಪಿಎಲ್ ಅಂತೇನಿಲ್ಲ, ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್ – ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.ಶಾಂತಿನಗರದ ಕೆಎಸ್ ​ಆರ್ ​ಟಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಬಹುದು ಎಂದರು.

ಸಭೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುತ್ತೇವೆ. ಅವರು ಅಂತಿಮ ಕ್ರಮ ಕೈಗೊಳ್ಳುತ್ತಾರೆ ಎಂದರು.ಶಾಂತಿನಗರದ ಕೆಎಸ್​ ಆರ್ ​ಟಿಸಿ ಕಚೇರಿಯಲ್ಲಿ ಸಭೆ ನಡೆದಿದೆ. ಪ್ರತಿ ವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ಕಡ್ಡಾಯ ಮಾಡಲಾಗಿದೆ.ಮುಖ್ಯಮಂತ್ರಿಗಳ ಎಲ್ಲ ಕಾರ್ಯದರ್ಶಿಗಳು ಹಾಗೂ ಎಂಡಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಎಲ್ಲ ನಿಗಮಗಳು ಒಂದಷ್ಟು ಗೈಡ್ಲೈನ್ಸ್ ನೀಡಿದ್ದಾರೆ. ಅವೆಲ್ಲವನ್ನೂ ಸಚಿವ ಸಂಪುಟದಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳುತ್ತೇವೆ.

Related News

spot_img

Revenue Alerts

spot_img

News

spot_img