ಬೆಂಗಳೂರು, ಮಾ. 07 : ಅರ್ಹ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯದ ಕೊಡಗು ಮತ್ತು ಕೊಪ್ಪಳ ಜಿಲ್ಲೆಯ ಗಂಗಾವತಿ ವ್ಯಾಪ್ತಿಯಲ್ಲಿರುವ ಅರ್ಹರು ವಸತಿ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಬೇಕಿದೆ. ಪ್ರವರ್ಗ 1 ಕ್ಕೆ ಸೇರಿದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ.
ಅರ್ಜಿಯನ್ನು ಸಲ್ಲಿಸಲು ಮಾರ್ಚ್ 15 ಕೊನೆಯ ದಿನಾಂಕ ಎಂದು ಹೇಳಲಾಗಿದೆ. ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದವರು ವಸತಿ ಸೌಲಭ್ಯವನ್ನು ಪಡೆಯಲು ಸ್ವಂತ ನಿವೇಶನವನ್ನು ಹೊಂದಿರಬೇಕು. ಅಲೆಮಾರಿ ಅರೆ ಅಲೆಮಾರಿ ಸಮುದಾಯದವರೆಮದು ಗುರುತಿಸಲು ಜಾತಿ ಪ್ರಮಾಣ ಪತ್ರವನ್ನು ಪಡೆದಿರಬೇಕು. ನಿವೇಶನವನ್ನು ಅರ್ಜಿದಾರರಾದ ಮಹಿಳೆ ಅಥವಾ ಪುರುಷರ ಹೆಸರಿನಲ್ಲಿ ನೋಂದಣಿ ಮಾಡಿಸಿರಬೇಕು. ಜೊತೆಗೆ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ಮಿತಿಯೊಳಗಿರಬೇಕು. ಈ ಹಿಂದೆ ಯಾವುದೇ ವಸತಿ ಯೋಜನೆಯನ್ನೂ ಪಡೆಯದೆ ಇರಬೇಕು.
ಅರ್ಜಿಯನ್ನು ಸಲ್ಲಿಸಲು ಕೆಲ ಅಧಿಕೃತ ದಾಖಲೆಗಳು, ಆಸ್ತಿ ತೆರಿಗೆ ರಸೀದಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಆಧಾರ್ ಕಾರ್ಡ್, ಇತ್ತೀಚಿನ 2 ಭಾವಚಿತ್ರ, ಆಸ್ತಿಗೆ ಸಂಬಂಧಿಸಿದ ಅಧಿಕೃತ ದಾಖಲೆಗಳು, ಆಸ್ತಿ ತೆರಿಗೆ ರಸೀದಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಅನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಇದೆಲ್ಲಾ ದಾಖಲೆಗಳೊಂದಿಗೆ ಅರ್ಜಿಯನ್ನು ತುಂಬಿ ಮೇಲೆ ಹೇಳಿರುವ ಕಚೇರಿಗಳಿಗೆ ಸಲ್ಲಿಸಬೇಕು. ವಸತಿ ನಿರ್ಮಾಣಕ್ಕೆ ಹಣವನ್ನು ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ವ್ಯಾಪ್ತಿಯಲ್ಲಿರುವ ಅರ್ಹ ಫಲಾನುಭವಿಗಳು ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಕಳೆದ ವರ್ಷವೂ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಆದರೆ, ನಿರೀಕ್ಷಿತ ಅರ್ಜಿಗಳಿಗಿಂತಲೂ ಕಡಿಮೆ ಬಂದಿದ್ದವು. ಹೀಗಾಗಿ ಮತ್ತೆ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗದಿಂದ 213, ಪರಿಶಿಷ್ಟ ಜಾತಿ 48, ಪರಿಶಿಷ್ಟ ಪಂಗಡ 75 ಅರ್ಜಿಗಳು ಬರಬೇಕಿವೆ. ಈ ಗುರಿಯನ್ನು ಮುಟ್ಟಲು ಮತ್ತೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 15 ರೊಳಗೆ 2021-22 ನೇ ಸಾಲಿಗೆ ಕೊಳಚೆ ಪ್ರದೇಶಗಳಲ್ಲಿ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಅವಾಸಿ ಸರ್ವರಿಗೂ ಸೂರು ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಬೇಕಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಸಂಬಂಧಪಟ್ಟು ಕಚೇರಿಗಳೀಗೆ ತೆರಳಬಹುದು. ಮೇಲೆ ಹೇಳಿರುವ ಕಚೇರಿಗಳಿಗೆ ಖುದ್ದಾಗಿ ಹೋಗಿ ಮಾಹಿತಿ ಪಡೆಯಬಹುದು ಇಲ್ಲವೇ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಸಂಖ್ಯೆ 08272 295628, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮೊಬೈಲ್ ನಂಬರ್ 8762476790, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ 9844531040 ಮತ್ತು ಕೊನೆಯದಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ 9481772143 ಈ ನಅಲ್ಕೂ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.