Revenue Facts

ಪ್ರಧಾನ ಮಂತ್ರಿ ಉಜ್ವಲ ಯೋಜನೆ(PMUY)ಯಡಿ ಉಚಿತ `LPG’ ಸಂಪರ್ಕಕ್ಕೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಉಜ್ವಲ ಯೋಜನೆ(PMUY)ಯಡಿ ಉಚಿತ `LPG’ ಸಂಪರ್ಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು;ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು (PMUY) 2016 ರಲ್ಲಿ ಪ್ರಾರಂಭಿಸಲಾಯಿತು. ಮೊದಲ ಹಂತದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಐದು ಕೋಟಿ ಮಹಿಳಾ ಸದಸ್ಯರಿಗೆ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಸಿಲಿಂಡರ್‌ (ಅಡುಗೆ ಅನಿಲ) ಸಂಪರ್ಕ ಒದಗಿಸುವ ಗುರಿ ಹೊಂದಿದೆ. ಎಲ್ಲಾ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಮನೆಗಳು, ಪಿಎಂಎವೈ ಮತ್ತು ಅಂತ್ಯೋದಯ ಅನ್ನ ಯೋಜನೆ ಫಲಾನುಭವಿಗಳು, ಅರಣ್ಯ ನಿವಾಸಿಗಳು, ಅತ್ಯಂತ ಹಿಂದುಳಿದ ವರ್ಗಗಳು, ಚಹಾ ತೋಟ ಮತ್ತು ಮಾಜಿ ಚಹಾ ತೋಟದ ಬುಡಕಟ್ಟುಗಳು ಮತ್ತು ದ್ವೀಪಗಳು ಅಥವಾ ನದಿ ದ್ವೀಪಗಳಲ್ಲಿ ವಾಸಿಸುವ ಜನರಿಗೆ PMUY ಯೋಜನೆಯನ್ನು ತೆರೆಯಲಾಗಿದೆ, ಉಜ್ವಲ್ ಯೋಜನೆಯಡಿ ಮೂರನೇ ಹಂತದ ಎಲ್.ಪಿ.ಜಿ ಸಂಪರ್ಕ ಪಡೆಯುವ ಗ್ರಾಹಕರಿಗೆ ಎರಡು ಬರ್ನರ್ ಸ್ಟೌವ್, 14.2 ಕೆ.ಜಿ ಸಿಲಿಂಡರ್ ಮತ್ತು ಎರಡು 5 ಕೆ.ಜಿ ಸಿಲಿಂಡರ್, ಒಂದು ರೆಗ್ಯುಲೇಟರ್, ಒಂದು ಸುರಕ್ಷಾ ಹೋಸ್, ಡಿ.ಜಿ.ಸಿ.ಸಿ ಬುಕ್‍ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಇದುವರೆಗೂ ಎಲ್.ಪಿ.ಜಿ ಅನಿಲ ಸಂಪರ್ಕಗಳನ್ನು ಹೊಂದಿರದ ಕುಟುಂಬದ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಎಲ್.ಪಿ.ಜಿ ವಿತರಕ ಕಂಪನಿಗೆ ಭೇಟಿ ನೀಡಿ ಸೌಲಭ್ಯವನ್ನು ಪಡೆಯಬಹುದು ಮತ್ತು ಕ್ಯೂ.ಆರ್.ಕೋಡ್ ಮೂಲಕ ಯೋಜನೆ ಮಾಹಿತಿ ಪಡೆಯಬಹುದಾಗಿದೆ.

ಉಚಿತ ಗ್ಯಾಸ್ ಪಡೆಯಲು ಹೀಗೆ ಮಾಡಿ

ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯಡಿ ಉಚಿತ ಎಲ್‌ಪಿಜಿ ಗ್ಯಾಸ್ ಸಂಪರ್ಕ ನೀಡುತ್ತಿದೆ. ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವರು ಈ ಯೋಜನೆ ಲಾಭ ಪಡೆದುಕೊಳ್ಳಬಹುದು. ಅದಕ್ಕಾಗಿ,ಬಿಪಿಎಲ್ಎಲ್ ರೇಷನ್ ಕಾರ್ಡ್ ಪ್ರತಿ, ಮನೆಯ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಮನೆಯ ಯಜಮಾನಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್ ತೆಗೆದುಕೊಂಡು ಸರ್ಕಾರಿ ಸ್ವಾಮ್ಯದ ಗ್ಯಾಸ್ ಏಜೆನ್ಸಿಗಳ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಬಹುದು,ಗ್ಯಾಸ್ ಏಜೆನ್ಸಿ ಅಧಿಕಾರಿ ನಿಮ್ಮ ಅರ್ಜಿ ನಮೂನೆ ಮತ್ತು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ನಂತರ 10 ರಿಂದ 15 ದಿನಗಳಲ್ಲಿ ನಿಮ್ಮ ಎಲ್ಪಿಜಿ ಅನಿಲ ಸಂಪರ್ಕವನ್ನು ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಲಾಭ ಪಡೆಯಲು ಎಲ್‌ಪಿಜಿ ವಿತರಣಾ ಏಜೆನ್ಸಿಯಲ್ಲಿ ಅರ್ಜಿ ಭರ್ತಿ ಮಾಡಿ ಸಲ್ಲಿಸುವ ಮೂಲಕ ಆಫ್‌ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೋಡ್‌ನಲ್ಲಿ ಅರ್ಜಿ ಸಲ್ಲಿಸುವುದಾದರೆ ಅರ್ಜಿದಾರರು ಮೊದಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ https://www.pmuy.gov.in ಗೆ ಹೋಗಿ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಬಹುದು ಮತ್ತು ಈ ಫಾರ್ಮ್ ಅನ್ನು ಹತ್ತಿರದ ಎಲ್‌ಪಿಜಿ ಕೇಂದ್ರದಲ್ಲಿ ಸಲ್ಲಿಸಬೇಕು.

 

Exit mobile version