ಬೆಂಗಳೂರು ಮಾ. 21 : ;ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ. ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.
1) ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಬಿ ಕೆ ರವಿ ಅವರನ್ನು ಕೊಪ್ಪಳ ವಿವಿ.
2) ಬಾಗಲಕೋಟೆಯ ತೋಟಗಾರಿಕೆ ವಿ.ವಿ.ದ ಡಾ.ಅಶೋಕ ಸಂಗಪ್ಪ ಆಲೂರು.
3) ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ ಆರ್ ಗಂಗಾಧರ.
4)ಬಾಗಲಕೋಟೆ ವಿವಿ, ಕುವೆಂಪು ವಿ.ವಿ.ದ ಡಾ.ಬಿ ಎಸ್ ಬಿರಾದಾರ್.
5) ಚಾಮರಾಜನಗರ ವಿವಿಗೆ ಬೆಳಗಾವಿಯ ಕೆ.ಎಸ್.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಆನಂದ್ ಶರದ್ ದೇಶಪಾಂಡೆ.
6) ಬೀದರ್ ವಿವಿ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಡಾ.ಸುರೇಶ್ ಎಚ್ ಜಂಗಮಶೆಟ್ಟಿ.
7) ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿ.ವಿ.ದ ನಿವೃತ್ತ ಪ್ರೊಫೆಸರ್ ಆಗಿರುವ ಡಾ.ಟಿ ಸಿ ತಾರಾನಾಥ್ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ .