ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramyya) ಅವರು ಆದೇಶ ಹೊರಡಿಸಿದ್ದಾರೆ.ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh gundurao), ಕಂದಾಯ ಇಲಾಖೆ ಕೃಷ್ಣಭೈರೇಗೌಡ(Krishnabyregowda), ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ(Priyankkharge), ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ(Ishwarkhandre) ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್(Santhosh lad) ಅವರನ್ನು ಸರ್ಕಾರದ ವಕ್ತಾರರಾಗಿ ನೇಮಿಸಲಾಗಿದೆ. ಈ ಐವರು ಸಚಿವರಿಗೆ ದಾಖಲೆಗಳು(Documents) ಹಾಗೂ ಮಾಹಿತಿಗಳನ್ನು ಕಾಲ ಕಾಲಕ್ಕೆ ಒದಗಿಸುವಂತೆ ಎಲ್ಲ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.ಸರ್ಕಾರದ ವಕ್ತಾರರಾಗಿ(Spokesman) ನೇಮಕಗೊಂಡಿರುವ ಈ ಎಲ್ಲಾ ಸಚಿವರು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ರಾಜ್ಯದ ಜನರ ಮುಂದಿಡಲಿದ್ದಾರೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ವಕ್ತಾರರಾಗಿ ನೇಮಕವಾದ ಸಚಿವರುಗಳಿಗೆ ಸರ್ಕಾರದ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಗಳನ್ನು ಕಾಲಕಾಲಕ್ಕೆ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಸೂಕ್ತ ನಿರ್ದೇಶನ ನೀಡಲು ಆದೇಶದಲ್ಲಿ ಸೂಚಿಸಲಾಗಿದೆ.