24.8 C
Bengaluru
Monday, October 7, 2024

ಸುಪ್ರೀಂಕೋರ್ಟ್​ಗೆ ಮತ್ತಿಬ್ಬರು ನ್ಯಾಯಮೂರ್ತಿಗಳ ನೇಮಕ

ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹಾಗೂ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ವಿ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಬುಧವಾರ ಅನುಮತಿ ನೀಡಿದೆ.ಈ ವಿಚಾರವನ್ನು ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಟ್ವೀಟ್ ಮಾಡಿದ್ದಾರೆ.ಈ ನಿಟ್ಟಿನಲ್ಲಿ ಬುಧವಾರ ರಾತ್ರಿ ನೇಮಕಾತಿ ಆದೇಶ ಹೊರಡಿಸಲಾಗಿದೆ.ಇವರ ನೇಮಕದೊಂದಿಗೆ ಸುಪ್ರೀಂಕೋಟ್‌ನ ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಏರಲಿದೆ. ನ್ಯಾಯಮೂರ್ತಿ ಭುಯಾನ್ ಅವರು ಆಗಸ್ಟ್ 1,2029 ರವರೆಗೆ ಮತ್ತು ನ್ಯಾಯಮೂರ್ತಿ ಭಟ್ಟಿ ಅವರು ಮೇ 5, 2027 ರವರೆಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಮುಂದುವರಿಯಲಿದ್ದಾರೆ.ಈ ಇಬ್ಬರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಜುಲೈ 5ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

Related News

spot_img

Revenue Alerts

spot_img

News

spot_img