22.9 C
Bengaluru
Friday, July 5, 2024

ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಮೇ 10 ರಂದು ಮತದಾನ, 13ಕ್ಕೆ ಫಲಿತಾಂಶ

ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ, : ವಿಧಾನಸಭೆ ಚುನಾವಣೆಗೆ ಇವತ್ತು ದಿನಾಂಕ ಘೋಷಣೆಯಾಗಿದ್ದು (ಮೇ ದಿ. 10ರಂದು ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯಲಿದೆಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣ ದಿನಾಂಕವನ್ನು ಘೋಷಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆ :

ನಾಮಪತ್ರ ಸಲ್ಲಿಕೆ : 20-04-2022
ನಾಮಪತ್ರ ಪರಿಶೀಲನೆ : 21-04-2023
ನಾಮಪತ್ರ ಹಿಂಪಡೆಯುವಿಕೆ : 24-04-2023
ಮತದಾನದ ದಿನಾಂಕ : 10-05-2023
ಫಲಿತಾಂಶದ ದಿನಾಂಕ : 13-05-2023

ಕರ್ನಾಟಕ ವಿಧಾನಸಭೆಯ ಅವಧಿ ಮೇ 24ರ ವರೆಗೆ ಇದ್ದು ಅದಕ್ಕೂ ಮುನ್ನ ಚುನಾವಣೆ ಪೂರ್ಣಗೊಳಿಸಬೇಕು. 224 ವಿಧಾನಸಭಾ ಕ್ಷೇತ್ರಗಳು ಮತ್ತು 5.21 ಕೋಟಿ ಮತದಾರರು, ಬಹುತೇಕ ಪುರುಷ ಮತ್ತು ಮಹಿಳಾ ಮತದಾರರು ಇದ್ದಾರೆ. 12.15 ಲಕ್ಷ 80 ವರ್ಷ+ ಮತದಾರರಿದ್ದು, ರಾಜ್ಯದಲ್ಲಿ ಪ್ರಥಮ ಬಾರಿಗೆ ಅಂಚೆ ಮತಪತ್ರ ಸೌಲಭ್ಯ ಪಡೆಯಲಿದ್ದಾರೆ.ಇದರಲ್ಲಿ 9,17,241 ಮೊದಲ ಬಾರಿ ಮತದಾರರು, 80 ವರ್ಷ ಮೇಲ್ಪಟ್ಟ 12,15,763 ಮತದಾರರು. ದಿವ್ಯಾಂಗರು 5,55,073 ಮತದಾರರು, 4,699 ತೃತೀಯ ಲಿಂಗಿ ಮತದಾರರು ಇದ್ದಾರೆ. ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳು ಸೇರಿ ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.

ಚುನಾವಣಾ ಆಯೋಗದ ಆ್ಯಪ್‌ನಲ್ಲಿ ಅಭ್ಯರ್ಥಿಗಳ ಸಂಪೂರ್ಣ ವಿವರ ಲಭ್ಯವಿರುತ್ತದೆ.ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 20 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಏಪ್ರಿಲ್ 24 ಮತದಾನ ದಿನಾಂಕ: ಮೇ 10 ಫಲಿತಾಂಶ ದಿನಾಂಕ: ಮೇ 13 ಎಲ್ಲಾ ಕ್ಷೇತ್ರಗಳ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ ,ಅಭ್ಯರ್ಥಿಯ ಅಫಿಡವಿಟ್ ಕೂಡ ಆ್ಯಪ್‌ನಲ್ಲೇ ಲಭ್ಯವಿರಲಿದ್ದು, ಚುನಾವಣಾ ಅಕ್ರಮದ ಬಗ್ಗೆ ಆ್ಯಪ್‌ ನಲ್ಲೇ ಮತದಾರರು ದೂರು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಿದರೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ. ಚುನಾವಣಾ ಅಕ್ರಮ ತಡೆಗೆ 2400 ತಂಡಗಳ ರಚನೆ ಮಾಡಲಾಗಿದೆ.

ಈಗಾಗಲೇ ರಾಜ್ಯದಲ್ಲಿ ಚುನಾವಣಾ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದ ಕೇಂದ್ರ ಚುನಾವಣಾ ಆಯೋಗ, ಇಂದು ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಈ ಕ್ಷಣದಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿ ಆಗಲಿದೆ.

 

 

 

 

 

Related News

spot_img

Revenue Alerts

spot_img

News

spot_img