Assembly elections : ಮೈಸೂರು: ಜ.10:- ಮತದಾರರ ಪಟ್ಟಿಯ ಪರಿಷ್ಕರಣೆ ಸಂಬಂಧ ಜನವರಿ 05 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು.ವಿಧಾನಸಭೆ ಚುನಾವಣೆಗೆ ಪೂರಕವಾಗಿ ಮತದಾರರ ಅಂತಿಮ ಕರಡು ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗವು ಗುರುವಾರ ಪ್ರಕಟಿಸಿದೆ. ಈ ಬಾರಿ ಪುರುಷರು, ಮಹಿಳೆಯರು ಹಾಗೂ ಇತರ ಸೇರಿ ಒಟ್ಟು 5,05,48,553 ಜನ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.
ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ರಾಜ್ಯ ಇವರ ಅಧಿಕೃತ ಜಾಲತಾಣ https://ceo.karnataka.gov.in ನಲ್ಲಿ ಲಭ್ಯವಿದೆ. ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ. ಹಾಗೂ ಸರಿಯಾದ ಹೆಸರನ್ನು ನಮೂದಿಸಿ ನೋಂದಾಯಿಸಿದ ಬಗ್ಗೆ ಖಚಿತಪಡಿಸಿಕೊಳ್ಳಬಹುದು
ಅಂತಿಮ ಮತದಾರರ ಪಟ್ಟಿಯಲ್ಲಿ 12,72,155 ಪುರುಷ ಮತದಾರರು, 12,87,502 ಮಹಿಳಾ ಮತದಾರರು ಹಾಗೂ 198 ತೃತೀಯ ಲಿಂಗ ಮತದಾರರು ಸೇರಿದಂತೆ ಒಟ್ಟು 25,59,855 ಮತದಾರರು ಇದ್ದಾರೆ. ಇವರಲ್ಲಿ 30,650 ಯುವ ಮತದಾರರು ಸೇರ್ಪಡೆಯಾಗಿದ್ದಾರೆ. ವಿವಿಧ ಕಾರಣಗಳಿಂದ 22,625 ಪ್ರಕರಣಗಳನ್ನು ಕೈಬಿಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2,905 ಮತಗಟ್ಟೆಗಳಿದ್ದು, ವಿವಿಧ ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆಗೆ ರಾಜಕೀಯ ಏಜೆಂಟ್‍ಗಳನ್ನು ನೇಮಿಸಬೇಕು. ಎಂದು ಮಾಹಿತಿ ನೀಡಿದರು.
ಮತದಾರರ ಸಹಾಯವಾಣಿ ಪ್ರಾರಂಭ
ಈ ಮೊದಲು ಒಂದು ವಿಧಾನಸಭಾ ಕ್ಷೇತ್ರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಸ್ಥಳಾಂತರಕ್ಕಾಗಿ ಚಾಲ್ತಿಯಲ್ಲಿದ್ದ ಅರ್ಜಿ ನಮೂನೆ-8ಎ ಯನ್ನು ರದ್ದುಪಡಿಸಲಾಗಿದೆ. ನಮೂನೆ-8ಎನಲ್ಲಿದ್ದ ಸೌಲಭ್ಯವನ್ನು ಪರಿಷ್ಕರಿಸಿದ ನಮೂನೆ-8ರಲ್ಲಿ ಒದಗಿಸಲಾಗಿದೆ. 2022ರ ಸೆಪ್ಟೆಂಬರ್ 1ರ ನಂತರದಲ್ಲಿ ಸೇರ್ಪಡೆ ಅಥವಾ ತಿದ್ದುಪಡಿ ಮಾಡುವ ಗುರುತಿನ ಚೀಟಿಯನ್ನು ಸ್ಪೀಡ್ ಪೋಸ್ಟ್ ಮುಖಾಂತರ ಮತದಾರರಿಗೆ ವಿತರಣೆ ಮಾಡಲಾಗುವುದು. ಮತದಾರರ ಪಟ್ಟಿಯ ಪರಿಷ್ಕರಣೆಯ ಸಲುವಾಗಿ 1950 ಮತದಾರರ ಸಹಾಯವಾಣಿಯನ್ನು ಪ್ರಾರಂಭಿಸಲಾಗುತ್ತಿದೆ.
ದೂರವಾಣಿ ಸಂಖ್ಯೆಯ ಸಂಪೂರ್ಣ ವಿವರ
ಮತದಾರರ ಪಟ್ಟಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಪಿರಿಯಾಪಟ್ಟಣ ತಾಲೂಕು ಕಚೇರಿ ದೂರವಾಣಿ ಸಂಖ್ಯೆ 08223-274175, ಕೆ.ಆರ್.ನಗರ ತಾಲೂಕು ಕಚೇರಿ ದೂರವಾಣಿ ಸಂಖ್ಯೆ 08223-262371,262234, ಹುಣಸೂರು ತಾಲೂಕು ಕಚೇರಿ ದೂರವಾಣಿ ಸಂಖ್ಯೆ 08222-252040, ಹೆಚ್.ಡಿ.ಕೋಟೆ ತಾಲೂಕು ಕಚೇರಿ ದೂರವಾಣಿ ಸಂಖ್ಯೆ 08228-255600, ನಂಜನಗೂಡು ತಾಲೂಕು ಕಚೇರಿ ದೂರವಾಣಿ ಸಂಖ್ಯೆ 08221-223108, ಮೈಸೂರು ತಾಲೂಕು ಕಚೇರಿ ದೂರವಾಣಿ ಸಂಖ್ಯೆ 0821-2414811, 2414812, ಮೈಸೂರು ಮಹಾನಗರ ಪಾಲಿಕೆ ದೂರವಾಣಿ ಸಂಖ್ಯೆ 0821-2418800, ಟಿ.ನರಸೀಪುರ ತಾಲೂಕು ಕಚೇರಿ ದೂರವಾಣಿ ಸಂಖ್ಯೆ 08227-260210ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.
ಯುವ ಮತದಾರರು ಎಷ್ಟು?
ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಮತ ಚಲಾಯಿಸುವುದಕ್ಕೆ ಅರ್ಹರಾದ 3,88,064 ಪುರುಷರು, 3,13,040 ಮಹಿಳೆಯರು, 139 ತೃತೀಯ ಲಿಂಗಿಗಳು ಸೇರಿ ಒಟ್ಟು 7,01,243 ಯುವ ಮತದಾರರು ಸೇರ್ಪಡೆಯಾಗಿದ್ದಾರೆ.
2011ರಲ್ಲಿ ಲಿಂಗಾನುಪಾತ 973 ಇದ್ದರೆ, ಈ ಬಾರಿ 988ಕ್ಕೆ ಏರಿಕೆಯಾಗಿದೆ. ಲೈಂಗಿಕ ಕಾರ್ಯಕರ್ತೆಯರು 1,00,834, ಬುಡಕಟ್ಟು ವಾಸಿಗಳು 30,517, ವಿಶೇಷಚೇತನರು 5,09,553 ಹಾಗೂ ತೃತೀಯ ಲಿಂಗಿಗಳು 41,317 ಅರ್ಹ ಮತದಾರರ ಪಟ್ಟಿಯಲ್ಲಿದ್ದಾರೆ ಎಂದು ಮನೋಜ್‍ಕುಮಾರ್ ಮೀನಾ ವಿವರಿಸಿದರು.