ಮಂಗಳೂರು: ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್ ಎನ್.ಕೆ.ಪದ್ಮನಾಭಗೆ ಆದಾಯಕ್ಕಿಂತ ಜಾಸ್ತಿ ಆಸ್ತಿ ಹೊಂದಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ₹ 26.5 ಲಕ್ಷ ದಂಡ ಹಾಗೂ 4 ವರ್ಷಗಳ ಕಾರಾಗೃಹವಾಸ ಶಿಕ್ಷೆ ವಿಧಿಸಿದೆ.ಅಪರಾಧಿಯು ದಂಡ ಕಟ್ಟಲು ತಪ್ಪಿದರೆ ಮತ್ತೆ ಆರು ತಿಂಗಳು ಸಾದಾ ಸಜೆ ಅನುಭವಿಸಬೇಕು ಎಂದು ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಗುರುವಾರ ಆದೇಶ ಮಾಡಿದ್ದಾರೆ.
ಇವರ ಮೇಲೆ ಲೋಕಾಯುಕ್ತ ಪೊಲೀಸರು 2015ರ ಫೆಬ್ರವರಿ ತಿಂಗಳಲ್ಲಿ ದಾಳಿ ನಡೆಸಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು, 1988ರ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1)(ಇ) ಹಾಗೂ 13(2) ಅಡಿ ಮೊಕದ್ದಮೆ ದಾಖಲಿಸಿಕೊಂಡಿದ್ದರು. ನವೀನ್ ಚಂದ್ರ ಜೋಗಿ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಅವರು ಈ ಪ್ರಕರಣದ ತನಿಖೆ ನಡೆಸಿದ್ದರು,ಸರ್ಕಾರದ ಪರ ಕರ್ನಾಟಕ ಲೋಕಾಯುಕ್ತ ಮಂಗಳೂರಿನ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಲೋಕಾಯುಕ್ತದ ಪರ ವಾದ ಮಂಡಿಸಿದರು.