#Attempt #besiege #CM #residence #caught by police
ಬೆಂಗಳೂರು;ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ,ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರ ಮೈಸೂರು ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತರನ್ನು ವಶಕ್ಕೆ ಪಡೆಯಲಾಗಿದೆ. ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ಮನೆ ಬಳಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಬಳಿಕ 50ಕ್ಕೂ ಹೆಚ್ಚು ರೈತರು ಹಾಗೂ ಕಬ್ಬು ಬೆಳೆಗಾರರು ಹಸಿರು ಶಾಲು ಹಿಡಿದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ರೈತರನ್ನು ವಶಕ್ಕೆ ಪಡೆದರು.ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದ್ದು, ಸರ್ಕಾರದ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹಲವು ರೈತ ಮುಖಂಡರು ಹಾಗೂ ರೈತ ಮಹಿಳೆಯರು ರಸ್ತೆಯಲ್ಲಿಯೇ ಮಲಗಿ ಪೊಲೀಸರ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ನಿವಾಸಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲೂ ಮುನ್ನೆಚ್ಚರಿಕೆಯಾಗಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಖಾಕಿ ಕಣ್ಗಾವಲು ನಿಯೋಜಿಸಲಾಗಿದೆ.