ಬೆಂಗಳೂರು;ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ರಾಜಕೀಯ ಕಾರ್ಯಕ್ರಮ, ವಿವಾಹ ಸಮಾರಂಭಗಳಲ್ಲಿ ಸುರಕ್ಷತೆಯ ಕಾರಣದಿಂದ ಪಟಾಕಿಯನ್ನು ನಿಷೇಧಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ, ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಿಸಿದಂತೆ ಸರ್ಕಾರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿ, ರಾಜ್ಯದಲ್ಲಿ ರಾಜಕೀಯ ಕಾರ್ಯಕ್ರಮಗಳು, ಗಣೇಶ ಹಬ್ಬ ಹಾಗೂ ಮದುವೆ ಸಂದರ್ಭದಲ್ಲಿ ಪಟಾಕಿಗಳನ್ನು ಬ್ಯಾನ್ ಮಾಡುವುದಾಗಿ ತಿಳಿಸಿದರು.ಪಟಾಕಿ ಮಾರಾಟ ಪರವಾನಗಿ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ.ಒಮ್ಮೆ ಪರವಾನಗಿ ಪಡೆದರೆ 5 ವರ್ಷದ ಬಳಿಕ ನವೀಕರಣಕ್ಕೆ ಅವಕಾಶವಿತ್ತು. ಇನ್ಮುಂದೆ ಪ್ರತಿವರ್ಷ ಪಟಾಕಿ ಮಾರಾಟ ಪರವಾನಗಿ ನವೀಕರಣಗೊಳಿಸಬೇಕು. ಆದೇಶ ಪಾಲನೆ ಮಾಡದಿದ್ದರೆ ಕಠಿಣ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ.ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದೆ. ಅತ್ತಿಬೆಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಅತ್ತಿಬೆಲೆ ಅಗ್ನಿ ದುರಂತ : ರಾಜಕೀಯ, ಹಬ್ಬ , ಸಮಾರಂಭಗಳಲ್ಲಿ ಪಟಾಕಿ ನಿಷೇಧ : ಸಿಎಂ ಸಿದ್ದರಾಮಯ್ಯ
by RF Desk