#Ayanur #Manjunath #joins #congress #today
ಬೆಂಗಳೂರು;ಮಾಜಿ ಸಂಸದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇಂದು ಕೆಪಿಸಿಸಿ(KPCC) ಕಚೇರಿಯಲ್ಲಿ ಕಾಂಗ್ರೆಸ್(C0ngress) ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಹೊಸ್ತಿಲಿನಲ್ಲಿ ಬಿಜೆಪಿಗೆ ಗುಡ್ ಬೈ ಹೇಳಿ ಜೆಡಿಎಸ್‌ಗೆ ಸೇರಿದ್ದ ಆಯನೂರು ಮಂಜುನಾಥ್, ಇದೀಗ ಕಾಂಗ್ರೆಸ್‌ನತ್ತ ವಾಲಿದ್ದಾರೆ. ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದ ಆಯನೂರು ಮಂಜುನಾಥ್, ಗುರುವಾರ(august24) ಅಧಿಕೃತವಾಗಿ ಬೆಂಗಳೂರಿನ (Bengaluru) ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ (Congress) ಪಕ್ಷ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ,ಶಿಕಾರಿಪುರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ನಾಗರಾಜಗೌಡ ಅವರು ನಮ್ಮೊಂದಿಗೆ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ತಿಳಿಸಿದರು,ವಿಧಾನಸಭೆ ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಸೇರ್ಪಡೆಯ ಸಂದರ್ಭ ಎದುರಾಗಿತ್ತು. ಆಗ ಕಾರಣಾಂತರದಿಂದ ಜೆಡಿಎಸ್ (JDS) ಸೇರಬೇಕಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ(KPCC) ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದೇನೆ ಎಂದರು.ಕಾಂಗ್ರೆಸ್ ಪಕ್ಷಕ್ಕೆ ಷರತ್ತು ರಹಿತವಾಗಿ ಸೇರಿದ್ದೇನೆ. ವಿಧಾನ ಪರಿಷತ್ ಚುನಾವಣೆಗೆ ಯಾರಿಗೆ ಟಿಕೆಟ್ ಕೊಟ್ಟರೂ ಗೆಲುವು ಮುಖ್ಯ. ಜೆಡಿಎಸ್ ಪಕ್ಷ ತೊರೆಯಲು ಯಾವುದೇ ಕಾರಣವಿಲ್ಲ.ಕೆಲವು ಕಾರಣಗಳಿಂದಾಗಿ ಕಾಂಗ್ರೆಸ್ ಸೇರ್ಪಡೆ ಆಗಬೇಕಾಗಿದೆ.