ಹೊಸದಿಲ್ಲಿ:ಅಯೋಧ್ಯೆಯ ವಿಮಾನ ನಿಲ್ದಾಣವನ್ನು ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗುವುದು ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್‌ನಲ್ಲಿ ವಿಮಾನ ನಿಲ್ದಾಣವನ್ನು ಅನಾವರಣಗೊಳಿಸಲಿದ್ದಾರೆ. ರಾಮಾಯಣದ ವಿಷಯಗಳು ಮತ್ತು ಅಂಶಗಳನ್ನು ಸಂಯೋಜಿಸಿ ಇದನ್ನು ವಿನ್ಯಾಸಗೊಳಿಸಲಾಗಿದೆ ಎಂದು ಕೇಂದ್ರವು ಪ್ರಕಟಣೆಯಲ್ಲಿ : ತಿಳಿಸಿದೆ. ಇದು ನಗರದಲ್ಲಿ ಪ್ರವಾಸೋದ್ಯಮ, ವ್ಯಾಪಾರ, ಉದ್ಯೋಗಾವಕಾಶಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು .ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(International Airport) ಮಹರ್ಷಿ ವಾಲ್ಮೀಕಿ(Maharshi Valmiki) ಹೆಸರಿಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಅಯೋಧ್ಯೆ ರೈಲು ನಿಲ್ದಾಣದ ಹೆಸರನ್ನು ‘ಅಯೋಧ್ಯಾ ಧಾಮ್’ ಎಂದು ಬದಲಾಯಿಸಿದ ಒಂದು ದಿನದ ನಂತರ, ಉತ್ತರ ಪ್ರದೇಶ ಸರ್ಕಾರ ‘ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮ್’ ಎಂದು ಮರುನಾಮಕರಣ ಮಾಡಲು ಚಿಂತನೆ ಮಾಡುತ್ತಿದೆ ಎನ್ನಲಾಗಿದೆ. ಜನವರಿ 22 ರಂದು ರಾಮಮಂದಿರ(Rammandir) ಉದ್ಘಾಟನಾ ಸಮಾರಂಭದ ಮೊದಲು, ಪ್ರಧಾನಿ ಮೋದಿ ಹೊಸ ವಿಮಾನ ನಿಲ್ದಾಣ ಮತ್ತು ನವೀಕರಿಸಿದ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ,ರಾಮಾಯಣ ಬರೆದ ವಾಲ್ಮೀಕಿ ಮಹರ್ಷಿಯ ಹೆಸರನ್ನೇ ಇದೀಗ ಆಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಂತಿಮಗೊಳಿಸಲಾಗಿದೆ. ರೈಲು ನಿಲ್ದಾಣಕ್ಕೆ ಆಯೋಧ್ಯಾ ಧಾಮ ಎಂದು ಹೆಸರಿಡಲಾಗಿದೆ. ಈ ಕುರಿತು ಡಿಸೆಂಬರ್ 30 ರಂದ ನಡೆಯಲಿರುವ ಉದ್ಘಾಟನೆ ವೇಳೆ ಪ್ರಧಾನಿ ನರೇಂದ್ರ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಆಯೋಧ್ಯೆಯಲ್ಲಿ ಶ್ರೀರಾಮನಿಗೆ ಭವ್ಯ ಮಂದಿರ ನಿರ್ಮಿಸಲಾಗಿದೆ.