ಬೆಂಗಳೂರು: ರಸ್ತೆಗಳು ಪರಿಕಲ್ಪನೆಯಲ್ಲಿ ಪಾದಚಾರಿ ಮಾರ್ಗಗಳು (Footway), ಗಾಡಿಗಳ ದಾರಿ (Wagon trail)ಗಳೂ ಒಳಗೊಂಡಿರುತ್ತವೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್(Highcourt), ಭೂಸ್ವಾಧೀನ ಕಾಯ್ದೆಯಡಿ(Land Acquisition Act) ಭೂಮಿ ಸ್ವಾಧೀನಪಡಿಸಿಕೊಂಡ ಮಾತ್ರಕ್ಕೆ ‘ಬಿ ಖರಾಬ್’ ಭೂಮಿಯಲ್ಲಿ ಸಾರ್ವಜನಿಕರ ಹಕ್ಕನ್ನು ರದ್ದುಪಡಿಸಲಾಗುವುದಿಲ್ಲ ಎಂದು ತಿಳಿಸಿದೆ. ಈ ಕುರಿತಾಗಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (APMC) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗೋವಿಂದರಾಜು ಸೂರಜ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.ಕಾಲುದಾರಿ ಅಥವಾ ಬಂಡಿ ಜಾಡು ಎಂಬ ಗಾಡಿ ಜಾಡು ಹಿಂದಿನ ರಸ್ತೆಗಳಾಗಿದ್ದು, ಈ ಪ್ರದೇಶದಲ್ಲಿ ಮತ್ತು ಸುತ್ತಮುತ್ತ ವಾಸಿಸುವ ಜನರು ವಿವಿಧ ಪ್ರದೇಶಗಳಿಗೆ ಪ್ರವೇಶಿಸಲು ಬಳಸುತ್ತಿದ್ದರು. ಅಲ್ಲದೇ, ಕಾಲುದಾರಿ ಬಂಡಿ ಜಾಡುವನ್ನು ಗ್ರಾಮದ ನಕ್ಷೆಯಲ್ಲಿ ಮತ್ತು ಸಂಬಂಧಿತ ಕಂದಾಯ ದಾಖಲೆಗಳಲ್ಲಿ ಗುರುತಿಸಲಾಗಿದೆ. ಜತೆಗೆ, ಭೂಮಾಲೀಕರಿಗೆ ಸಂಬಂಧಿಸಿದಂತೆ ಈ ಭಾಗವನ್ನು ‘ಬಿ ಖರಾಬ್’ ಭೂಮಿ ಎಂದು ವರ್ಗೀಕರಿಸಲಾಗಿದೆ. ಈ ಜಮೀನುಗಳು ಸರ್ಕಾರಕ್ಕೆ ಸೇರಿದ್ದರೂ, ಸಾರ್ವಜನಿಕರ ಹಕ್ಕನ್ನು ಸಹ ನೀಡಲಾಗಿರುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.ಕರ್ನಾಟಕ ಭೂ ಕಂದಾಯ ಕಾಯ್ದೆ–1964ರ ಕಲಂ 67ರ ಪ್ರಕಾರ ಎಲ್ಲಾ ಸಾರ್ವಜನಿಕ ರಸ್ತೆಗಳು, ಬೀದಿಗಳು, ಓಣಿಗಳು, ಪಥಗಳು, ಸೇತುವೆಗಳು, ಕಂದಕಗಳು, ತಡೆಗೋಡೆಗಳು ಮತ್ತು ಬೇಲಿಗಳು ಸರ್ಕಾರಕ್ಕೆ ಸೇರಿವೆ ಎಂದು ಸೂಚಿಸುತ್ತದೆ.
ಯಾವುದೇ ಖಾಸಗಿ ವ್ಯಕ್ತಿಗಳು ಪರಿವರ್ತಿಸಲು ಸಾಧ್ಯವಾಗದ ಸರ್ಕಾರಕ್ಕೆ ಸೇರಿದ ಭೂಮಿಯನ್ನು ಬಿ ಖರಾಬ್ ಭೂಮಿ ಎಂದು ಕರೆಯಲಾಗುತ್ತದೆ. ಈ ಭೂಮಿಯನ್ನು ಸಾರ್ವಜನಿಕವಾಗಿ ಸ್ಮಶಾನ ಭೂಮಿಯಾಗಿ ಬಳಸಲಾಗುತ್ತದೆ ಅಥವಾ ಗ್ರಾಮದಲ್ಲಿ ಕುಂಬಾರಿಕೆಗೆ ಹಂಚಲಾಗುತ್ತದೆ. ಈ ಜಮೀನುಗಳನ್ನು ಸಾರ್ವಜನಿಕ ಬಳಕೆಗೆ ನಿಗದಿಪಡಿಸಿರುವುದರಿಂದ ಮೌಲ್ಯಮಾಪನವೂ ಆಗಿಲ್ಲ. ಬಿ-ಖರಾಬ್ ಭೂಮಿಯನ್ನು ಸಾಮಾನ್ಯವಾಗಿ ಜನರು ಉದ್ಯಾನವನಗಳು, ಕಾಲುದಾರಿಗಳು, ಟ್ಯಾಂಕ್‌ಗಳು ಮತ್ತು ಹೊಳೆಗಳಾಗಿ ಬಳಸುತ್ತಾರೆ. ಪ್ರಸ್ತುತ, ಬಿ ಖರಾಬ್ ಲ್ಯಾಂಡ್ .ಕೆಲವೊಮ್ಮೆ ಖರಾಬ್ ಲ್ಯಾಂಡ್ ಸರ್ಕಾರಕ್ಕೆ ಯಾವುದೇ ವೆಚ್ಚದ ಪ್ರಯೋಜನಗಳನ್ನು ನೀಡುವುದಿಲ್ಲ, ರಿಯಲ್ ಎಸ್ಟೇಟ್(Realestate) ಸಂಸ್ಥೆಗಳಿಗೆ ಇದು ತುಂಬಾ ಉಪಯುಕ್ತವಾಗಿದೆ, ಏಕೆಂದರೆ ಹೆಚ್ಚಿನ ಭೂಮಿಯನ್ನು ವಸತಿ ಅಥವಾ ವಾಣಿಜ್ಯ ಸಂಕೀರ್ಣ ನಿರ್ಬಂಧಗಳಿಗೆ ಬಳಸಬಹುದು.2019ರ ಫೆಬ್ರವರಿ 5ರಂದು ಕಾಲುದಾರಿ ಮುಚ್ಚಿರುವ ಸಂಬಂಧ ಸ್ಥಳೀಯ ತಹಶೀಲ್ದಾರ್ ಎಪಿಎಂಸಿಗೆ ನೋಟಿಸ್ ಜಾರಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಎಪಿಎಂಸಿ, ಅರ್ಜಿಗೆ ಸಂಬಂಧಿಸಿದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಹಂಚಿಕೆ ಮಾಡಲಾಗಿದೆ. ಇಡೀ ಆಸ್ತಿ ಎಪಿಎಂಸಿಗೆ ಸೇರಿದ್ದಾಗಿದ್ದು, ಈ ಜಮೀನಿನಲ್ಲಿ ಯಾವುದೇ ಕಾಲು ದಾರಿ(footway) ಇಲ್ಲ ಎಂದು ಉತ್ತರಿಸಿದ್ದರು. ಜತೆಗೆ, ಇದೇ ಅಂಶಗಳನ್ನು ಉಲ್ಲೇಖಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಹ ಸಲ್ಲಿಸಿದ್ದರು.ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದ ಸರ್ಕಾರದ ಪರ ವಕೀಲರು, ಕೇವಲ 10 ಎಕರೆ 15 ಗುಂಟೆ ಭೂಮಿಯನ್ನು ಮಾತ್ರ ಸ್ವಾಧೀನಪಡಿಸಿಕೊಂಡು ಅರ್ಜಿದಾರರಿಗೆ ಹಂಚಿಕೆ ಮಾಡಲಾಗಿದೆ ಮತ್ತು ಪಕ್ಕದ ಬಿ ಖರಾಬ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿಲ್ಲ ಅಥವಾ ಅರ್ಜಿದಾರರಿಗೆ ವರ್ಗಾವಣೆ ಮಾಡಿಲ್ಲ. ಜತೆಗೆ, ಕರ್ನಾಟಕ ಭೂಕಂದಾಯ ಕಾಯ್ದೆಯ(Land Revenue Act) ಸೆಕ್ಷನ್ 68ರ ಪ್ರಕಾರ ’ಬಿ ಖರಾಬ್’ನಲ್ಲಿ ಸಾರ್ವಜನಿಕರ ಹಕ್ಕು ಕಸಿದುಕೊಳ್ಳಲಾಗಿಲ್ಲ. ಆದ್ದರಿಂದ ಈ ಸ್ಥಳದ ಮತ್ತು ಸುತ್ತಮುತ್ತಲಿನ ಎಲ್ಲ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಕಾಲುದಾರಿ’ ಬಳಸಲು ಅರ್ಹರಾಗಿರುತ್ತಾರೆ. ಅರ್ಜಿದಾರರು ಈ ಭೂಮಿಯನ್ನು ಮೀಸಲಿಡಬೇಕಾಗಿತ್ತು. ಅದನ್ನು ಮಾರುಕಟ್ಟೆ ಪ್ರಾಂಗಣದ ಉದ್ದೇಶಗಳಿಗಾಗಿ ಬಳಸಬಾರದು ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.