Revenue Facts

ಹಬ್ಬದ ಹಿನ್ನೆಲೆ; ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ

ಹಬ್ಬದ ಹಿನ್ನೆಲೆ; ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ

ಬೆಂಗಳೂರು;ಬಿಬಿಎಂಪಿಯು ಸೆಪ್ಟೆಂಬರ್ 18ರಂದು ಗೌರಿ-ಗಣೇಶ್ ಹಬ್ಬದ ಹಿನ್ನೆಲೆಯಲ್ಲಿ,ಪ್ರಾಣಿಗಳ ವಧೆ ಹಾಗೂ ಮಾಂಸದ ಮಾರಾಟವನ್ನು ನಿಷೇಧಿಸಿದೆ.”ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ – ಸೆಪ್ಟೆಂಬರ್ 18ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿಗಳನ್ನು ಸಂಹಾರ ಮಾಡುವುದು ಹಾಗೂ ಮಾಂಸವನ್ನು ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ” ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಎಂದು ಪಶುಪಾಲನೆ ವಿಭಾಗದ ಜಂಟಿ ನಿದೇರ್ಶಕರು ತಿಳಿಸಿದ್ದಾರೆ.ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಮತ್ತು ತಯಾರಿಕೆಗೆ ಬಿಬಿಎಂಪಿ ಈಗಾಗಲೇ ಕಟ್ಟುನಿಟ್ಟಿನ ನಿಷೇಧ ಹೇರಿದ್ದು, ನಿಯಮಗಳನ್ನು ಉಲ್ಲಂಘಿಸಿದರೆ ತಯಾರಕರು ಭಾರಿ ದಂಡ ವಿಧಿಸಬೇಕಾಗುತ್ತದೆ. ನಗರದ ವಿವಿಧ ಸ್ಥಳಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುತ್ತಿರುವುದರಿಂದ ಬೀದಿಗಳಲ್ಲಿ ಯಾರಿಗೂ ತೊಂದರೆಯಾಗದಂತೆ ಆಚರಣೆಗೆ ಬಿಬಿಎಂಪಿ ನಿರ್ದೇಶನ ನೀಡಿದೆ,ನಗರದಲ್ಲಿ ಸೆಕ್ಸ್, ಲ್ಯಾನ‌ಗಳ ಅಳವಡಿಕೆಯನ್ನು ಈಗಾಗಲೇ ಬಿಬಿಎಂಪಿ ನಿಷೇಧಿಸಿದೆ.ಸ್ಯಾಂಕಿ ಕೆರೆ, ಯಡಿಯೂರು ಕೆರೆ, ಹಲಸೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ, ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ.

 

Exit mobile version