ರಾಮನಗರ ಜು. 05 :ಕಳೆದ ಕೆಲವು ದಿನಗಳಲ್ಲಿ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಯಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣಕ್ಕಾಗಿ ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ರಾಮನಗರ ಪೊಲೀಸರು ಮುಂದಾಗಿದ್ದಾರೆ.ರಾಮನಗರದ ಚನ್ನಪಟ್ಟಣ ಬಳಿ ಇಂಟರ್ ಸೆಪ್ಟರ್ ಅಳವಡಿಸಿ ಟ್ರಾಫಿಕ್ ಪೊಲೀಸರು ಸ್ಪೀಡ್ ಚೆಕ್ ಮಾಡುತ್ತಿದ್ದು, ವೇಗದ ಮಿತಿ ಮೀರಿದ ವಾಹನ ಸವಾರರಿಗೆ 1000 ರೂ. ದಂಡ ಹಾಕುತ್ತಿದ್ದಾರೆ.
ಹೆದ್ದಾರಿ ಮೇಲೆ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು, ಕಾರ್ ವೇಗದ ಮಿತಿ 100, ಬೈಕ್ ವೇಗದ ಮಿತಿ 80 ಹಾಗೂ ಟ್ರಕ್, ಲಾರಿ ಬಸ್ಸಿನ ಮಿತಿ 60 ನಿಗದಿ ಮಾಡಲಾಗಿದೆ. ಕಾರು 101 ವೇಗದಲ್ಲಿ ಹೋದರೂ 1000 ರೂ. ದಂಡ ಹಾಕಲಾಗುತ್ತಿದೆ.ಎಕ್ಸ್ಪ್ರೆಸ್ವೇನಲ್ಲಿ ನಿಗದಿತ ವೇಗದಲ್ಲಿ ವಾಹನಗಳು ಸಂಚರಿಸಬೇಕು.ಹೆದ್ದಾರಿಯಲ್ಲಿ ಸ್ಪೀಡ್ ರೇಡಾರ್ ಗನ್ ಮತ್ತು ವಾಹನದ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ.ಎಂದು ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.