ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮಾ.14ರ ಬೆಳಗ್ಗೆ 8 ಗಂಟೆಯಿಂದ ಟೋಲ್ ಸಂಗ್ರಹ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಧಾರ ಮಾಡಿದೆ .ಬೆಂಗಳೂರಿನಿಂದ ಮಂಡ್ಯದ ನಿಡಘಟ್ಟದವರೆಗೆ ಟೋಲ್ ಸಂಗ್ರಹ ಮಾಡಲಾಗುವುದು ಈ ಭಾಗದಲ್ಲಿನ ಎಲ್ಲಾ ಸರ್ವಿಸ್ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಲಾಗಿದೆ ಕಳೆದ ಮಾರ್ಚ್ 1 ರಂದು ಟೋಲ್ ಸಂಗ್ರಹಕ್ಕೆ ಹೆದ್ದಾರಿ ಪ್ರಾಧೀಕಾರ ಮುಂದಾಗಿತ್ತು. ಆದರೆ, ಸಾರ್ವಜನಿಕರು ಹಾಗೂ ವಾಹನ ಸವಾರರಿಂದ ಸಾಕಷ್ಟು ವಿರೋಧ ಉಂಟಾಗಿದ್ದ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಬ್ರೇಕ್ ಹಾಕಲಾಗಿತ್ತು. ಈಗ ಮಾರ್ಚ್ 14 ರಿಂದ ಟೋಲ್ ಸಂಗ್ರಹಿಸಲಾಗುವುದು ಎಂದು ಪ್ರಕಟಣೆ ನೀಡಿದ್ದಾರೆ. ಇದೀಗ ಮಂಗಳವಾರದಿಂದ(ಮಾ.14) ಟೋಲ್ ಸಂಗ್ರಹಕ್ಕೆ ಮುಂದಾಗಿರುವ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನಿಂದ – ನಿಡಘಟ್ಟದವರೆಗೂ ಒಟ್ಟು 56 ಕಿಮೀ ರಸ್ತೆಗೆ ನಾಳೆಯಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದೆ.
ವಿವಿಧ ಬಗೆಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ. ಇತ್ತ ಸರ್ವೀಸ್ ರಸ್ತೆ ಪೂರ್ಣಗೊಳ್ಳದೇ ಟೋಲ್ ವಸೂಲಿಗೆ ಆರಂಭಿಸಿರುವುದಕ್ಕೆ ಬಿಡದಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ಎಚ್ಚರಿಕೆ ನೀಡಿದೆ. ಹೀಗಾಗಿ ಮಂಗಳವಾರ ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ಹೆದ್ದಾರಿ ಪ್ರಾಧಿಕಾರ ಟೋಲ್ ಕೇಂದ್ರಗಳನ್ನು ಆರಂಭಿಸಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ರಾಮನಗರ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಹೆದ್ದಾರಿ ಯೋಜನಾ ನಿರ್ದೇಶಕ ಬಿ.ಟಿ ಶ್ರೀಧರ್ ಮನವಿ ಮಾಡಿದ್ದಾರೆ.
ಫೆ.28ರ ಬೆಳಗ್ಗೆ 8 ಗಂಟೆಯಿಂದ ಮೊದಲ ಹಂತದ ಟೋಲ್ ಕೇಂದ್ರಗಳು ಕಾರ್ಯಾರಂಭ ಮಾಡಲಾಗುತ್ತದೆ ಎಂದು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹೆದ್ದಾರಿ ಉದ್ಘಾಟನೆಗೂ ಮೊದಲು ಪ್ರಕಟಣೆ ಹೊರಡಿಸಿತ್ತು. ಮಾರ್ಚ್ 12ರಂದು ಪ್ರಧಾನಿ ಮೋದಿ ಅವರು ಹೆದ್ದಾರಿಯನ್ನು ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಸುಂಕು ವಸೂಲಾತಿಯನ್ನು ಅಧಿಕೃತವಾಗಿ ಪ್ರಾರಂಭಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಆರು ಪಥಗಳ ಎಕ್ಸ್‌ಪ್ರೆಸ್ ವೇನಲ್ಲಿ ಸಂಚರಿಸುವವರಿಗೆ ಮಾತ್ರ ಟೋಲ್ ಅನ್ವಯ ಆಗಲಿದ್ದು, ಸರ್ವಿಸ್ ರಸ್ತೆಯಲ್ಲಿ ಸಂಚಾರಕ್ಕೆ ಯಾವುದೇ ಟೋಲ್ ಇರುವುದಿಲ್ಲ. ವಿವಿಧ ಮಾದರಿಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ.8000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮೊದಲ ಹಂತದ ಕಾಮಗಾರಿ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹ ಆರಂಭ ಮಾಡಲಾಗುತ್ತಿದೆ,ಮೈಸೂರು ಕಡೆಯಿಂದ ಪ್ರಯಾಣಿಸುವವರಿಗಾಗಿ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿ ಟೋಲ್ ಪ್ಲಾಜಾ ನಿರ್ಮಾಣವಾಗಿದೆ. ಈ ಕೇಂದ್ರಗಳು ತಲಾ 11 ಗೇಟ್‌ಗಳನ್ನು ಒಳಗೊಂಡಿವೆ.ಕಣಮಿಣಕಿ ಗ್ರಾಮದ ಬಳಿ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವವರಿಂದ ಟೋಲ್ ಸಂಗ್ರಹಕ್ಕೆ ಟೋಲ್ ಕೇಂದ್ರ ನಿರ್ಮಾಣವಾಗಿದೆ
55 ಕಿಲೋಮೀಟರ್ಗೆ 155 ರೂ. ಟೋಲ್ ನಿಗದಿಯಾಗಿದೆ. ಮತ್ತುಳಿದ 55 ಕಿಲೋಮೀಟರ್ಗೆ 155 ರೂ. ನಿಗದಿಪಡಿಸಲಾಗಿದೆ. ಅಲ್ಲಿಗೆ ಒಟ್ಟು 300 ರೂ. ಟೋಲ್ ಪಾವತಿಸಬೇಕು. ಒಂದು ದಿವಸಕ್ಕೆ 5 ಕೋಟಿ ರೂ. ಸಂಗ್ರಹವಾಗಲಿದೆ. ಅಲ್ಲಿಗೆ ವರ್ಷಕ್ಕೆ 2,444 ಕೋಟಿ ರೂ. ಸಂಗ್ರಹವಾದಂತಾಗಲಿದೆ. 10 ವರ್ಷ ಟೋಲ್ ಸಂಗ್ರಹಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಲಿಗೆ 10 ವರ್ಷದಲ್ಲಿ 20,440 ಕೋಟಿ ರೂ. ಸಂಗ್ರಹವಾಗಲಿದೆ. ರಸ್ತೆ ಮಾಡಲು 12 ಸಾವಿರ ಕೋಟಿ ರೂ. ವೆಚ್ಚವಾಗಿದೆ. ಅಲ್ಲಿಗೆ 8 ಸಾವಿರ ಕೋಟಿ ರೂ. ಹೆಚ್ಚುವರಿಯಾಗಿ ಟೋಲ್ ವಸೂಲಿಯಾದಂತಾಗಲಿದೆ.