Revenue Facts

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಟೋಲ್ ದರ ನಿಗದಿ;ಸಂಸದ ಪ್ರತಾಪ್ ಸಿಂಹ ಹೇಳಿಕೆ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಟೋಲ್ ದರ ನಿಗದಿ;ಸಂಸದ ಪ್ರತಾಪ್ ಸಿಂಹ ಹೇಳಿಕೆ

ಬೆಂಗಳೂರು;ಮೈಸೂರು- ಬೆಂಗಳೂರು ಹೆದ್ದಾರಿ ಕಾಮಗಾರಿ ಒಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಯಾವಾಗ ಈ ದಶಪಥ ಹೆದ್ದಾರಿ ಅಧಿಕೃತವಾಗಿ ಓಪನ್ ಆಗುತ್ತೆ ಅನ್ನೋದಕ್ಕಿಂತಲೂ ಹೆಚ್ಚು ಈ ಹೆದ್ದಾರಿಯಲ್ಲಿನ ಟೋಲ್ ಕುರಿತು ಕುತೂಹಲ ಹೆಚ್ಚಾಗುತ್ತಿದೆ. ಎರಡೂ ಕಡೆ ಸೇರಿ 250 ರೂ. ಟೋಲ್ ಹಾಕಬಹುದು. ಪ್ರಧಾನಿ ನರೇಂದ್ರ ಮೋದಿ ಮಾರ್ಚ್ ಎರಡು ಅಥವಾ ಮೂರನೇ ವಾರ ಹೈವೇ ಉದ್ಘಾಟಿಸಲಿದ್ದಾರೆ.3,500 ಕೋಟಿ ವೆಚ್ಚದಲ್ಲಿ 115 ಕಿ.ಮೀ. ಹೈವೆ ನಿರ್ಮಾಣ ಮಾಡಲಿದ್ದು, ಶಂಕು ಸ್ಥಾಪನೆಯಾದ 24 ತಿಂಗಳಲ್ಲಿ ರಸ್ತೆಕಾಮಗಾರಿಪೂರ್ಣವಾಗಲಿದೆ.
ಎಂದು ಮೈಸೂರು – ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾನುಸಾರ ಕಿಮೀಗೆ ಇಂತಿಷ್ಟು ಅಂತ ಟೋಲ್ ಅಂದಾಜು ಮಾಡುತ್ತಾರೆ. ಮೇಲ್ಸೇತುವೆಗಳಿಗೆ ಟೋಲ್ ಜಾಸ್ತಿ ಇರುತ್ತೆ. ಕುಂಬಳಗೋಡು, ಮದ್ದೂರಿನಲ್ಲಿ ಫೈ‌ ಓವರ್ ಇದೆ. ಮೊದಲ ಹಂತದಲ್ಲಿ ಬೆಂಗಳೂರು- ನಿಡಘಟ್ಟ ನಡುವೆ ಟೋಲ್ ಶುರುವಾಗಿದೆ.ಶಂಕು ಸ್ಥಾಪನೆಯಾದ 24 ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ಣವಾಗಲಿದೆ ಎಂದು ಮೈಸೂರು – ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಪ್ರತಿ ಕಿಲೋ ಮೀಟರ್​ಗೆ 2 ರೂ.ನಂತೆ ಟೋಲ್ ಸಂಗ್ರಹಿಸುವ ಸಾಧ್ಯತೆಗಳಿವೆ. ಈ ಶುಲ್ಕ ಫ್ಲೈ ಓವರ್​ಗಳಲ್ಲಿ ಕಿಲೋ ಮೀಟರ್​ಗೆ 3 ರೂ. ಗೆ ಏರುವ ಸಾಧ್ಯತೆಯಿದೆ. ಒಟ್ಟಾರೆ ಬೆಂಗಳೂರಿನಿಂದ ಮೈಸೂರಿಗೆ ಈ ಹೆದ್ದಾರಿಯಲ್ಲಿ ತೆರಳಲು ಅಂದಾಜು 250- 300 ರೂ. ಟೋಲ್ ಶುಲ್ಕ ಆಗುವ ಸಂಭವವಿದೆ.

ಬೆಂಗಳೂರು – ಮೈಸೂರು ಹೈವೆಗೆ ಹೆಸರು ಇಡುವ ವಿಚಾರವಾಗಿ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿಗೆ ವ್ಯಕ್ತಿಗಳ ಹೆಸರಿಡುವ ಪದ್ಧತಿ ಇಲ್ಲ.ಎಲ್ಲಾ ಜಿಲ್ಲೆಗಳ ಜನರು ಭಕ್ತಿಯಿಂದ ನೋಡುವುದು ಕಾವೇರಿ ತಾಯಿಯನ್ನು. ಕಾವೇರಿ ನದಿಯ ಈ ಭಾಗದ ಜನರಲ್ಲಿ ಪೂಜ್ಯ ಭಾವನೆ ಇದೆ.ಮಗ ದೊಡ್ಡೋನಾ ತಾಯಿ ದೊಡ್ಡೋರಾ ಅನ್ನೋ ರೀತಿ ಚರ್ಚೆ ಬೇಡ‌‌ ತಾಯಿಯೆ ದೊಡ್ಡವಳು ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಟ್ಟಿದ್ದೇವೆ. ರೈಲು ಗಳಿಗೆ ಒಡೆಯರ್ ಹೆಸರು ಇಟ್ಟಿದ್ದೇವೆ. ರಾಜ ಕುಟುಂಬಕ್ಕೆ ಏನೂ ಗೌರವ ಕೊಡಬೇಕೋ ಎಲ್ಲವನ್ನೂ ನಾವು ನೀಡಿದ್ದೇವೆ. ಕಾವೇರಿ ಈ ನಾಡಿನ ಜೀವ ನದಿ ಈ ಹೆಸರಿನ ವಿಚಾರದಲ್ಲಿ ವಿವಾದ ಮಾಡಬೇಡಿ ಎಂದು ಮನವಿ ಮಾಡಿಕೊಂಡರು.

ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಗ್ರೀನ್‌ಫೀಲ್ಡ್ ಕಾರಿಡಾರ್ ಯೋಜನೆಯ ಭಾಗವಾಗಿದೆ. ಈ 10 ಪಥದ ಹೆದ್ದಾರಿಯ ಕುರಿತು ಈಗಾಗಲೇ ಹೆಚ್ಚಿನ ನಿರೀಕ್ಷೆ ವ್ಯಕ್ತವಾಗಿದೆ.ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಮಂಡ್ಯ ಬೈಪಾಸ್ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ. ಈ ಕುರಿತು ಸಂಸದ ಪ್ರತಾಪ್ ಸಿಂಹ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.

Exit mobile version