Revenue Facts

ಹೆಚ್​ಡಿ ದೇವೇಗೌಡರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ವಿವಿ

ಹೆಚ್​ಡಿ ದೇವೇಗೌಡರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ವಿವಿ

ಬೆಂಗಳೂರು;ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್.ಡಿ.ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಗೌರವ ಡಾಕ್ಟರೇಟ್ ಪ್ರದಾನ ಸ್ವೀಕರಿಸಿದ ಬಳಿಕ ಮಾತನಾಡಿದ ಹೆಚ್‍ಡಿಡಿ, ವಿದ್ಯೆ ಮತ್ತು ಸಂಸ್ಕಾರ ಬದುಕಿನ ಬೇರುಗಳಿದ್ದಂತೆ, ಈ ಎರಡು ಒಟ್ಟಿಗೆ ಬೆಳೆದಾಗ ಮಾತ್ರ ಬದುಕಿಗೊಂದು ಸಾರ್ಥಕತೆ ಸಿಗುತ್ತದೆ ಎಂದರು. ವಿದ್ಯೆ ಕೇವಲ ಕಾಗದದ ಸರ್ಟಿಫೀಕೆಟ್ ಆಗಿರದೇ, ಸಂಸ್ಕಾರ ಒಳಗೊಂಡಿರಬೇಕು ಎಂದು ಹೇಳಿದರು.ಈ ವಿವಿ ಬಗ್ಗೆ ನನಗೆ ಅಪಾರ ಗೌರವ ಇದೆ.ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಅಗತ್ಯ ಹೆಚ್ಚಿದೆ ಎಂದು ತಿಳಿಸಿದರು,ವಿದ್ಯಾರ್ಥಿ ಜೀವನ ತಪ್ಪಸ್ಸು ಇದ್ದಂತೆ. ವಿದ್ಯೆ ಒಬ್ಬನ ಜೀವನ ಕಟ್ಟಿಕೊಳ್ಳವುದು ಮಾತ್ರವಲ್ಲ, ದೇಶವನ್ನು ಸಮಾಜವನ್ನು ಕಟ್ಟುತ್ತದೆ.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಸಂದಿರುವುದು ಸಂತಸ ತಂದಿದೆ. ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ.ಇಸ್ರೋದ ಸಂಸ್ಥೆ ಇಂದು ಬಾಹ್ಯಕಾಶ ಕ್ಷೇತ್ರ ಭೂಪಟದಲ್ಲಿ ವಿಶ್ವಕ್ಕೆ ಪರಿಚಯ ಮಾಡಿ ಗೌರವ ತಂದಿದೆ ಎಂದರು.

Exit mobile version