ಒಂಟಿ ಮನೆ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಿದ ಬಿಬಿಎಂಪಿ:-

0
106

ಒಂಟಿ ಮನೆ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಿದ ಬಿಬಿಎಂಪಿ:-
ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರು ಸ್ವಂತ ಮನೆ ಕಟ್ಟಿಲು ಹಾಗೂ ಖಾಸಗಿ ಇಲ್ಲವೇ ಸರ್ಕಾರಿ ಅಪಾರ್ಟ್ ಮೆಂಟ್ ನಲ್ಲಿ ಪ್ಲಾಟ್ ಗಳನ್ನು ಕರಿದಿಸಲು ಬಯಸುವವರು ಒಂಟಿ ಮನೆ ಯೋಜನೆಯಡಿ 05 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಪಾಲಿಕೆ ವಿಸ್ತರಿಸಿದೆ.

ಈ ಮೊದಲು ಈ ಯೋಜನೆಯಡಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು 2022 ರ ನ.18 ಕೊನೆದಿನವಾಗಿತ್ತು. ಈ ಸಂದರ್ಭದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದವರಿಗೆ ಮತ್ತೊಂದು ಅವಕಾಶ ನೀಡುವಂತೆ ಕೆಲವರು ಶಾಸಕರು ಮತ್ತು ಸಾರ್ವಜನಿಕರಿಂದ ಬೇಡಿಕೆ ಬಂದಿರುವುದರಿಂದ ಜನವರಿ 20 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಪಾಲಿಕೆ ತಿಳಿಸಿದೆ.

ಆಸಕ್ತರು ಪಾಲಿಕೆಯ ವೆಬ್ ಸೈಟ್ https://welfare.bbmpgov.in ಮೂಲಕ ಉಚಿತವಾಗಿ ಅರ್ಜಿಸಲ್ಲಿಸಬಹುದಾಗಿದೆ. ಅಲ್ಲದೇ ಬೆಂಗಳೂರು ಒನ್ ಕೇಂದ್ರದಲ್ಲೂ ರೂ 30 ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಎಲ್ಲಾ ವಲಯ ಆಯುಕ್ತರ ಕಚೇರಿಗಲ್ಲೂ ಸಹಾಯ ಕೇಂದ್ರ ತೆರೆಯಲಾಗಿದ್ದು, ಅಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ಇದೆ ಎಂದು ಪಾಲಿಕೆಯ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರು ತಿಳಿಸಿದ್ದಾರೆ.

ಆರ್ಹತೆಗಳು:-
ಫಲಾನುಭವಿಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ವಾಸದ ದೃಢೀಕರಣ ಪ್ರಮಾಣ ಪತ್ರಗಳಾದ ಗುರುತಿನ ಚೀಟಿ, ಪಡಿತರ ಚೀಟಿ, ನಗರ ಪಾಲಿಕೆಯ ಸಂಬಂಧ ಪಟ್ಟ ಕಂದಾಯ ಇಲಾಖೆಯಿಂದ ಪಡೆದಿರುವ ವಾಸದ ದೃಢಿಕರಣ ಪ್ರಮಾಣ ಪತ್ರ ಹಾಗೂ ಸಂಬಂಧ ಪಟ್ಟ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.