#BBMP #preparing #publish #finallist #wardallocation
ಬೆಂಗಳೂರು.ಸೆ 26;ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಅಂತಿಮಗೊಳಿಸಿ ಎಂದು ಅಧಿಸೂಚನೆಯನ್ನು ಹೊರಡಿಸಲಾಗಿದೆ. 2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಅಂತಿಮಗೊಳಿಸಿ ಅಧಿಸೂಚಿಸಲಾಗಿರುತ್ತದೆ.ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ತಯಾರಿ ನಡೆಸಿದ್ದು,ಸಾರ್ವಜನಿಕ ಆಕ್ಷೇಪಣೆ ಬಳಿಕ 225 ವಾರ್ಡಗಳನ್ನು (BBMP Wards) ಅಧಿಕೃತಗೊಳಿಸಿ (ಸೆಪ್ಟೆಂಬರ್ 25) ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದ 243 ವಾರ್ಡ್ಗಳನ್ನು ಕಾಂಗ್ರೆಸ್ ಸರ್ಕಾರ ಇದೀಗ 225ಕ್ಕೆ ಇಳಿಸಿದೆ. ಇದರೊಂದಿಗೆ 224 ವಾರ್ಡ್ಗಳಿಗೆ ಚುನಾವಣೆ ನಡೆಯಲಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿನಿಯಮ, 2020ರ ಕಲಂ 7ರಲ್ಲಿ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(BBMP) ಸಂಬಂಧಿಸಿದಂತೆ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಾಡಲಾಗಿದೆ.