20 C
Bengaluru
Sunday, December 22, 2024

ಬಿಬಿಎಂಪಿ ಶಾಲೆಗಳು ಶಿಕ್ಷಣ ಇಲಾಖೆಯ ತೆಕ್ಕೆಗೆ: ಡಿ.ಕೆ. ಶಿವಕುಮಾರ್

ಬೆಂಗಳೂರು; ಬಿಬಿಎಂಪಿ(BBMP) ವ್ಯಾಪ್ತಿಯ ಶಾಲೆ, ಕಾಲೇಜುಗಳನ್ನು ಇನ್ಮುಂದೆ ಶಿಕ್ಷಣ ಇಲಾಖೆ ಅಧೀನಕ್ಕೆ ನೀಡಲಾಗುವುದು ಎಂದು ಡಿಸಿಎಂ(DCM) ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ‘ಪ್ರತಿ ವರ್ಷ ಬಿಬಿಎಂಪಿ(BBMP) ಶಾಲೆಗಳ ಫಲಿತಾಂಶದಲ್ಲಿ ಕುಸಿತ ಕಂಡಿರುವುದು ಗಮನಿಸಲಾಗಿದ್ದು, ಮುಂದೆ ಇದಕ್ಕೆ ಅವಕಾಶ ನೀಡಬಾರದು. ಹೀಗಾಗಿ ಗುಣಮಟ್ಟದ ಶಿಕ್ಷಣ ನೀಡಲು ಈ ನಿರ್ಣಯ ಕೈಗೊಳ್ಳಲಾಗಿದೆ. ಶಿಕ್ಷಣ ನೀಡುವ ಜವಾಬ್ದಾರಿಯನ್ನು ಮಾತ್ರ ಶಿಕ್ಷಣ ಇಲಾಖೆಗೆ ಹಾಗೂ ಮೂಲಸೌಕರ್ಯ, ಕಟ್ಟಡ ನಿರ್ವಹಣೆಯನ್ನು ಬಿಬಿಎಂಪಿ ಮಾಡಲಿದೆ’ ಸಿಎಸ್ಆರ್ ನಿಧಿಯ ಮೂಲಕ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳ(Karnataka public school) ನಿರ್ಮಾಣ ಮಾಡುವ ಗುರಿ ಸರ್ಕಾರದ ಮುಂದಿದ್ದು, ಮೊದಲ ವರ್ಷ 500 ಶಾಲೆಗಳ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಮುಂದಿನ ತಿಂಗಳು ಮೊದಲನೇ ಅಥವಾ ಎರಡನೇ ವಾರದಲ್ಲಿ ಎಲ್ಲಾ ಸಿಎಸ್ಆರ್(CSR) ಕಂಪನಿಗಳನ್ನು ಕರೆದು ಅವರಿಗೆ ಈ ಶಾಲೆಗಳ ನಿರ್ಮಾಣ ಯೋಜನೆಗಳನ್ನು ನೀಡುತ್ತೇವೆ. ಎಂದರು.ಶಾಲೆ ನಿರ್ಮಾಣಕ್ಕೆ ಬೇಕಾದ ಭೂಮಿಯನ್ನು ಕನಿಷ್ಠ 2 ಎಕರೆಯಿಂದ ಮೂರ್ನಾಲ್ಕು ಎಕರೆಯಷ್ಟು ಜಾಗವನ್ನು ಸರ್ಕಾರ ನೀಡಲಿದ್ದು, ಅಲ್ಲಿ ಈ ಸಂಸ್ಥೆಗಳು ಶಾಲೆ ನಿರ್ಮಿಸಲಿವೆ. ಪ್ರತಿ ಶಾಲೆಯ ಮೂಲಭೂತ ಸೌಕರ್ಯಕ್ಕೆ ಕನಿಷ್ಠ 4 ಕೋಟಿಯಿಂದ 7 ಕೋಟಿ ರೂ.ವರೆಗೂ ವೆಚ್ಚವಾಗಲಿದೆ.

Related News

spot_img

Revenue Alerts

spot_img

News

spot_img