24.4 C
Bengaluru
Sunday, September 8, 2024

BBMP Voter list: ಬೆಂಗಳೂರಿನ 2024ರ ಅಂತಿಮ ಮತದಾರರ ಪರಿಷ್ಕರಣ ಪಟ್ಟಿ ಪ್ರಕಟ

#BBMP Voter list #Bengaluru 2024 #final revised #voter list #published

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತದಾರರ ಪರಿಷ್ಕರಣೆ ಪಟ್ಟಿಯನ್ನು ಪ್ರಕಟಿಸಿದೆ. ಮತದಾರರು ತಮ್ಮ ಮತದಾರರ ಮಾಹಿತಿಯನ್ನು (ಹೆಸರು, ತಂದೆಯ ಹೆಸರು, ಸಂಬAಧ, ಲಿಂಗ, ಜನ್ಮ ದಿನಾಂಕ ವಿಳಾಸ ಮತ್ತು ಪೋಟೊ) ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರ ಸೇರಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 98,43,577 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು.ಅದರಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 50,78,525 ಪುರುಷ ಮತದಾರರರು, 47,63,268 ಮಹಿಳಾ ಮತದಾರರು ಹಾಗೂ 1,784 ಇತರೆ ಮತದಾರರು ಸೇರಿ ಒಟ್ಟು 98,43,577 ಮತದಾರರಿದ್ದಾರೆ ಎಂದು ತಿಳಿಸಿದರು.ಮುಖ್ಯ ಚುನಾವಣಾಧಿಕಾರಿ ರವರ www.ceokarnataka.kar.nic.in ಮತ್ತು ಬಿಬಿಎಂಪಿ www.bbmp.gov.in ವೆಬ್‌ಸೈಟ್ ನಲ್ಲಿ ಸಹ ಅಂತಿಮ ಮತದಾರರ ಪಟ್ಟಿಯನ್ನು(Electoral Roll) ಪ್ರಚುರ ಪಡಿಸಲಾಗುವುದು ಎಂದರು.ಸಾರ್ವಜನಿಕರು ಮತದಾರರ ಪಟ್ಟಿ ಕಾರ್ಯ ಚಟುವಟಿಕೆಗಳ ಲಾಭವನ್ನು ಪಡೆದುಕೊಂಡು ಯಾವುದೇ ಕಛೇರಿಗೆ ಹೋಗದೆ ಅವರಿರುವ ಸ್ಥಳದಿಂದಲೆ Web Portal-Voters.eci.gov.in, Voter Helpline Mobile App ಹಾಗೂ 1950 Voter Helpline ಮುಖಾಂತರ ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಆಗಿರುವ ತಪ್ಪುಗಳಿಗೆ ಸಂಬAಧಪಟ್ಟ ನಮೂನೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ(Special Commissioner of Election Division) ಆರ್. ರಾಮಚಂದ್ರನ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ದಯಾನಂದ, ಸ್ನೇಹಲ್, ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.

Related News

spot_img

Revenue Alerts

spot_img

News

spot_img