27.6 C
Bengaluru
Friday, October 11, 2024

ಇಂದು ಶಕ್ತಿ ಯೋಜನೆಯ ಬೆನ್ನಲ್ಲೇ, ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ!

ಬೆಂಗಳೂರು: ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ, ರಾಜ್ಯ ಸರ್ಕಾರದಿಂದ ಇಂದು ಐದು ಗ್ಯಾರಂಟಿಗಳಲ್ಲಿ ಇದುವರೆಗೆ ನಾಲ್ಕು ಗ್ಯಾರಂಟಿಗಳಿಗೆ ಅಧಿಕೃತ ಆದೇಶ ಹೊರಡಿಸಿದೆ. ಇಂದು ಶಕ್ತಿ ಯೋಜನೆಯ ಬೆನ್ನಲ್ಲೇ, ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ.ಈ ಸಂಬಂಧ ಇಂದು ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ದಿನಾಂಕ 02-06-2023ರಂದು ನಡೆದ ಸಂಪುಟ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿರುತ್ತದೆ. ಗೃಹ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್ ಗಳ ಮೇಲೆ ಶೇಕಡ 10ರಷ್ಟು ಹೆಚ್ಚಿನ ವಿದ್ಯುತ್ ಬಳಕೆ ಮಿತಿಯನ್ನು ಅನುಮಿತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸಂಪುಟ ಅನುಮೋದಿಸಿದೆ ಎಂದಿದ್ದಾರೆ. ಅದನ್ನು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.

ಈ ಯೋಜನೆಯನ್ನು ಜುಲೈ 2023 ತಿಂಗಳ ವಿದ್ಯುತ್‌ ಬಳಕೆಗೆ ಆಗಸ್ಟ್ 2020ರ ತಿಂಗಳಿಂದ ನೀಡುವ ಜಿಲ್ಲೆಗೆ ಅನ್ವಯವಾಗುವಂತೆ ಈ ಕೆಳಕಂಡ ಪರತ್ತುಗಳೊಂದಿಗೆ ಜಾರಿಗೆ ತರಲು ಆದೇಶಿಸಿದೆ.ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.ಕಾರಣ, ಒಂದು ಕಟ್ಟಡದಲ್ಲಿ ಒಂದಕ್ಕಿಂತ ಹೆಚ್ಚು ಬಾಡಿಗೆ ಮನೆಗಳು ಇರುತ್ತವೆ. ಎಲ್ಲ ಮನೆಗಳ ಮೀಟರ್‌ಗಳೂ ಮನೆ ಮಾಲೀಕನ ಹೆಸರಿನಲ್ಲಿ ಇರುತ್ತದೆ. ಹೀಗಾಗಿ ಈಗಿರುವ ಷರತ್ತಿನ ಪ್ರಕಾರ “ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ ಒಂದು ಸ್ಥಾನಕ್ಕೆ ಮಾತ್ರ ಈ ಯೋಜನೆಯ ಸೌಲಭ್ಯಕ್ಕೆ ಅರ್ಹರಾಗುವರು” ಎಂಬ ಅಂಶಕ್ಕೆ ಸರ್ಕಾರ ಗಟ್ಟಿಯಾಗಿ ಕುಳಿತರೆ ಬಾಡಿಗೆದಾರರಿಗೆ ಉಚಿತ ವಿದ್ಯುತ್‌ ಸಿಗುವುದಿಲ್ಲ. ಹಾಗಾಗಿ ಮನೆಯ ಮಾಲೀಕನಿಗೆ ಮಾತ್ರ ಗೃಹ ಜ್ಯೋತಿ ಭಾಗ್ಯ ಒಲಿಯಲಿದೆ.

ಗೃಹ ಜ್ಯೋತಿ ಹತ್ತು ಮಾರ್ಗಸೂಚಿಗಳು

1.ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಆನ್ವಯವಾಗುವುದಿಲ್ಲ.

2. ಪ್ರತಿ ತಿಂಗಳ: ಮಿಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್‌ ಬಳಕೆಯ ಪ್ರರ್ಮಾಣಕ್ಕೆ ಬಿಲ್ಲನ್ನು ನಮೂದಿಸುವುದು.

3. ಗೃಹ ವಿದ್ಯುತ್‌ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್‌ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸುವದು. 4 ಆರ್ಷ ಯೂನಿಟ್ / ಮೊತ್ತಕ್ಕಿಂತ ಒಳಗೆ ಬೆಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು

5. ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವ ಗ್ರಾಹಕರು ಸೇವಾ ಒಂದು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.

6. ಪ್ರತಿ ಫಲಾನುಭವಿಯು ತನ್ನ Customer ID Account ID ಅನ್ನು ಆಧಾರ್ ‌ಗೆ ಕಡ್ಡಾಯವಾಗಿ

7. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು,

8.ದಿನಾಂಕ 30.06.2023ರ ಅಂತ್ಯಕ್ಕೆ (ಜೂನ್ 2003ರ ಮಾಹೆಯಲ್ಲಿ ಬಳಸಿದ ವಿದ್ಯುತ್‌ ಪ್ರಮಾಣಕ್ಕೆ ಜುಲೈ 2021ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್‌ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು, ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.

9, ಗೃಹ ವಿದ್ಯುತ್‌ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಆಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.

10. ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸಾವರಕ್ಕೆ ಮಂತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು. ಗ್ರಾಹಕನಿಗೆ ನೀಡಿದ ಉಚಿತ ಮೊತ್ತವನ್ನು ಸರ್ಕಾರದಿಂದ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಸಹಾಯಧನದ ಮೂಲಕ ಪಾವತಿಸಲಾಗುವುದು.

Related News

spot_img

Revenue Alerts

spot_img

News

spot_img