#Bescom #AEE #officer #caught # Lokayukta #police trap
ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು (Power supply) ಸಂಸ್ಥೆಯ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ಲೋಕಾಯುಕ್ತ(Lokayukta) ಬಲೆಗೆ ಬಿದ್ದಿದ್ದು, ಆತನನ್ನು ಅರೆಸ್ಟ್ ಮಾಡಲಾಗಿದೆ.ನಾಗರಬಾವಿ ವ್ಯಾಪ್ತಿಯ ತಣಿಸಂದ್ರ ಚೆಸ್ಕಾಂ ಕಚೇರಿಯ ಎಇಇ(AEE) ನವೀನ ಲೋಕಾಯುಕ್ತ ಬಲೆಗೆ ಬಿದ್ದವರು.ನವೀನ್, ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಯ E9 ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಬಂಧಿತ (Arrest) ಆರೋಪಿ ನವೀನ್ ಕುಮಾರ್ ಎಂದು ತಿಳಿದುಬಂದಿದೆ. 80 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ನವೀನ್ ಅವರನ್ನು ವಶಕ್ಕೆ ಪಡೆದಿದ್ದಾರೆ.ಸಾರ್ವಜನಿಕರೊಬ್ಬರ ದೂರಿನ (Complaint) ಅನ್ವಯ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ನವೀನ್‌ನನ್ನು ಅರೆಸ್ಟ್ ಮಾಡಿದ್ದಾರೆ.