22.4 C
Bengaluru
Saturday, June 15, 2024

‘OPS’ ಜಾರಿಗಾಗಿ ಕಾಯುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಭಾರಿ ನಿರಾಸೆ : ಜಾರಿಯಿಲ್ಲ – ಸಿಎಂ ಸಿದ್ದರಾಮಯ್ಯ.

ಬೆಂಗಳೂರು ಜು.14 : ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರ್ಕಾರಿ ನೌಕರರ (ಹೊಸ ಪಿಂಚಣಿ ಯೋಜನೆ-ಎನ್‌ಪಿಎಸ್) ಮತ್ತು ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಬಹುಕಾಲದ ಬೇಡಿಕೆಯನ್ನು ರದ್ದುಗೊಳಿಸಿದೆ. ) ಜಾರಿಗೊಳಿಸುವುದಾಗಿ ಭರವಸೆ ನೀಡಿದರು.

ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿಲ್ಲ ಎಂಬುದಾಗಿ ತಿಳಿಸಿದೆ.. ಈ ಮೂಲಕ ಒಪಿಎಸ್ ಜಾರಿಗಾಗಿ ಕಾಯುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ.

ವಿಧಾನ ಪರಿಷತ್ ನಲ್ಲಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ರಾಜ್ಯದಲ್ಲಿ ಎನ್‌ಪಿಎಸ್ ಯೋಜನೆಯಡಿ ಸರ್ಕಾರಿ ನೌಕರರ ಸಂಖ್ಯೆಗೆ ಸಂಬಂಧಿಸಿದಂತೆ ಸಿಎಂ ನೀಡಿದ ಉತ್ತರದಂತೆ, 24-06-2023 ರಂತೆ ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಂಖ್ಯೆ 3,04,511. ಸ್ವಾಯತ್ತ ಸಂಸ್ಥೆಯ ನೌಕರರು ಸೇರಿ ಸಂಖ್ಯೆ ಇದಾಗಿದೆ ಎನ್ನಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆಯೇ ಎಂಬ ಪ್ರಶ್ನೆಗೆ ಇಲ್ಲ ಎಂದು ಉತ್ತರಿಸಿದ್ದಾರೆ.

ಹಾಗಿದ್ದಲ್ಲಿ ಎನ್ ಪಿಎಸ್ ಯೋಜನೆಯನ್ನು ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಯಾವಾಗ ಜಾರಿ ಮಾಡಲಾಗುವುದು ಎಂದ ಪ್ರಶ್ನೆಗೆ ಉತ್ತರಿಸಿರರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಿನಾಂಕ 01-03-2023ರಲ್ಲಿ ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದು ಪಡಿಸುವ ಸಂಬಂಧ ಈಗಾಗಲೇ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.

Related News

spot_img

Revenue Alerts

spot_img

News

spot_img