Revenue Facts

ಹೆಚ್​.ಡಿ.ರೇವಣ್ಣಗೆ ಬಿಗ್ ಶಾಕ್

ಬೆಂಗಳೂರು;ಜೆಡಿಎಸ್ ಪಕ್ಷದ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ಅಸಿಂಧುಗೊಳಿಸಿದ ಬೆನ್ನಲ್ಲೇ ಇದೀಗ ಶಾಸಕರಾಗಿ ಹೆಚ್.ಡಿ.ರೇವಣ್ಣ ಆಯ್ಕೆ ಅಸಿಂದು ಕೋರಿ ಅರ್ಜಿ ವಿಚಾರಣೆಗೆ ಬಂದಿದ್ದು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಎಲ್ಲಾ ಅಭ್ಯರ್ಥಿಗಳಿಗೂ ಕರ್ನಾಟಕ ಹೈಕೋರ್ಟ್‌ ಸಮನ್ಸ್ ಜಾರಿಗೆ ಆದೇಶಿಸಿದೆ.ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪದಲ್ಲಿ ಶಾಸಕ HD ರೇವಣ್ಣಗೆ ಬಿಗ್ ಶಾಕ್ ಎದುರಾಗಿದೆ. ಚುನಾವಣೆ ವೇಳೆ ರೇವಣ್ಣ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಪರಾಜಿತ ಅಭ್ಯರ್ಥಿ ದೇವರಾಜೇಗೌಡ, ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಹೊಳೆನರಸೀಪುರದಿಂದ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೂ ಕರ್ನಾಟಕ ಹೈಕೋರ್ಟ್ ಸಮನ್ಸ್ ಜಾರಿಗೆ ಆದೇಶಿಸಿದೆ. ವಿಧಾನಸಭೆ ಕಾರ್ಯದರ್ಶಿ ಮೂಲಕವೂ ಸಮನ್ಸ್ ಜಾರಿ ಮಾಡಲು ಆದೇಶಿಸಿದೆ.ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿ ಮಾಡಲು ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಅಕ್ರಮದ ಮೂಲಕ ಹೆಚ್.ಡಿ.ರೇವಣ್ಣ ಜಯಗಳಿಸಿದ್ದಾರೆ.2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಹಾಗಾಗಿ ಇಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ದೇವರಾಜೇಗೌಡ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

Exit mobile version