ಬೆಂಗಳೂರು;ದೆಹಲಿಯ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ(CWRC) ಕಚೇರಿಯಲ್ಲಿ ಇಂದು ಮಹತ್ವದ ಸಭೆ ನಡೆಯಿತು. ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಿತು.ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ CWMA ಸೂಚನೆ ನೀಡಿದ್ದು, CWRA ಆದೇಶ ಎತ್ತಿಹಿಡಿದಿದೆ,ಇದೀಗ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಅಕ್ಟೋಬರ್.16 ರಿಂದ ಅಕ್ಟೋಬರ್ 31 ರವರೆಗೆ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ ನೀಡಿದೆ. 3,000 ಕ್ಯೂಸೆಕ್ ನೀರು ಹರಿಸುವಂತೆ ದೆಹಲಿಯ ಸಭೆಯಲ್ಲಿ ಆದೇಶ ಹೊರಡಿಸಿದೆ.ಕಳೆದೆರಡು ದಿನಗಳ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) 3 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಆದೇಶಿಸಿತ್ತು. ಇದೀಗ CWRC ಆದೇಶವನ್ನು CWMA ಎತ್ತಿ ಹಿಡಿದಿದೆ.