#Bilkis Banu case # Supreme Court# dismissed # petition # criminals
ನವದೆಹಲಿ;2002ರಲ್ಲಿ ಗುಜರಾತ್‌ನಲ್ಲಿ(Gujrat) ನಡೆದ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆ ಪ್ರಕರಣದಲ್ಲಿ 11 ಅಪರಾಧಿಗಳು ಶರಣಾಗಲು(surrender) ಸಮಯ ವಿಸ್ತರಣೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್(Supremecourt) ಇಂದು (January 19) ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಅಂತಹ ವಿನಂತಿಗಳನ್ನು ಅನುಮತಿಸಲು ಅಪರಾಧಿಗಳು ಉಲ್ಲೇಖಿಸಿದ ಯಾವುದೇ ಮಾನ್ಯ ಕಾರಣವಿಲ್ಲ ಎಂದು ಹೇಳಿದರು.ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಿಗೆ ಗುಜರಾತ್ ಸರ್ಕಾರ ಬಿಡುಗಡೆಗೊಳಿಸಿ, ಆದೇಶಿಸಿತ್ತು. ಬಳಿಕ ಸುಪ್ರೀಂ, ಈ ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿ, ಆದೇಶ ನೀಡಿತ್ತು.ಒಟ್ಟು 11 ಅಪರಾಧಿಗಳ ಪೈಕಿ ಮೂವರು ವೈಯುಕ್ತಿಕ ಕಾರಣಗಳನ್ನು ನೀಡಿ ಶರಣಾಗತಿಯ ಅವಧಿ ವಿಸ್ತರಿಸುವಂತೆ ಕೋರಿದ್ದರು. ಈ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಎರಡು ವಾರಗಳಲ್ಲಿ ಜೈಲಿಗೆ ಮರಳುವಂತೆ ಜನವರಿ 8ರಂದು ನೀಡಿದ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದೆ.ವಿಸ್ತರಣೆಗೆ ಅವಕಾಶ ನೀಡಲು ಅರ್ಜಿಯಲ್ಲಿ ಯಾವುದೇ ಕಾರಣ ಕಂಡುಬಂದಿಲ್ಲ. ಎಲ್ಲಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ” ಎಂದು ಕೋರ್ಟ್ ಆದೇಶಿಸಿದೆ.ಅಪರಾಧಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶ್ಯಾಮ್ ಭಗವಾನದಾಸ್ ಶಾ, ಬಿಪಿನ್ ಚಂದ್ರ ಜೋಷಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನಾ ಅವರು ಜನವರಿ 22 ರೊಳಗೆ ಶರಣಾಗಬೇಕು.2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿದ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ಆರೋಪದಲ್ಲಿ ಹನ್ನೊಂದು ಅಪರಾಧಿಗಳು ಸುಪ್ರೀಂ ಕೋರ್ಟ್ ಶಿಕ್ಷೆಗೆ ಗುರಿಯಾಗಿದ್ದರು. ಆದರೆ ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ, ಆಗಸ್ಟ್ 14, 2023ರಂದು, ಈ ಅಪರಾಧಿಗಳನ್ನು ಗುಜರಾತ್ ಸರ್ಕಾರ ಅವಧಿಪೂರ್ವವಾಗಿ ಬಿಡುಗಡೆ ಮಾಡಿತ್ತು. ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆ ಬಿಲ್ಕಿಸ್ ಬಾನೊ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.