26.4 C
Bengaluru
Wednesday, December 4, 2024

ಇನ್ಮುಂದೆ ಗ್ರಾಮ ಪಂಚಾಯ್ತಿ’ಗಳಲ್ಲೇ ‘ಜನನ, ಮರಣ ಪ್ರಮಾಣಪತ್ರ’ ಲಭ್ಯ

ಬೆಂಗಳೂರು ಜು.13 : ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಜನನ ಮತ್ತು ಮರಣಗಳ ನೋಂದಣಿಗೆ 100% ಅನುಕೂಲವಾಗುವಂತೆ, ಜನನ, ಮತ್ತು ಮರಣದ ನಂತರ 30 ದಿನಗಳ ನಂತರ ನೋಂದಣಿ ಮಾಡಲು ಗ್ರಾಮ ಲೆಕ್ಕಿಗರನ್ನು ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಜನನ ಮರಣ ನೋಂದಣಿ 1969ರ ಪ್ರಕರಣ7(5)ರನ್ವಯ, ಜನನ ಮರಣ ಘಟನೆಗಳು ಸಂಭವಿಸಿದ 30 ದಿನಗಳವರೆಗೆ ಘಟನೆಗಳನ್ನು ನೋಂದಾಯಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಉಪನೋಂದಣಾಧಿಕಾರಿಗಳನ್ನಾಗಿ ಹಾಗೂ ಪ್ರಕರಣ 7(1)ರನ್ವಯ ಜನನ ಮರಣ ಘಟನೆಗಳು ಸಂಭವಿಸಿದ 30 ದಿನಗಳ ನಂತರದ ವಿಳಂಬ ನೋಂದಣಿಯ ನೋಂದಾಯಿಸಲು ಗ್ರಾಮ ಲೆಕ್ಕಾಧಿಕಾರಿಗಳನ್ನು ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಗ್ರಾಮ ಲೆಕ್ಕಾಧಿಕಾರಿಗಳು, ಜನನ ಮತ್ತು ಮರಣ ನೋಂದಣಾಧಿಕಾರಿಗಳು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ/ಆದೇಶವನ್ನು ಪಡೆದ ನಂತರ ನಿಗದಿತ ವಿಳಂಬ ಶುಲ್ಕದೊಂದಿಗೆ ನೋಂದಾಯಿಸಲು ಆದೇಶಿಸಲಾಗಿದೆ. ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ ಹೊರಡಿಸಿದ ನಂತರ ಈ ಆದೇಶವು ಜಾರಿಗೆ ಬರಲಿದೆ ಎಂದು ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಸಮನ್ವಯ ಮತ್ತು ಸಾಂಖ್ಯಿಕ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿನಾಥ್ ಅವರು ಆದೇಶ ಹೊರಡಿಸಿದ್ದಾರೆ.

Related News

spot_img

Revenue Alerts

spot_img

News

spot_img