ಬೆಂಗಳೂರು;ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿಧಾನಸೌಧ ಎದುರಿನ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕುಮಾರಸ್ವಾಮಿ, ಡಿ ವಿ ಸದಾನಂದ ಗೌಡ ಸೇರಿದಂತೆ ವಿವಿಧ ಘಟಾನುಘಟಿ ನಾಯಕರು ಪಾಲ್ಗೊಂಡಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವಂತಹ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ,ಕಾವೇರಿ ವಿಚಾರವಾಗಿ ನಡೆಯುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ಜಂಟಿ ಹೋರಾಟದಲ್ಲಿ ಮಾಜಿ ಸಚಿವ ಮುನಿರತ್ನ ಜೆಡಿಎಸ್ ಬಾವುಟ ಹಿಡಿದುಕೊಳ್ಳುವ ಮೂಲಕ ಗಮನ ಸೆಳೆದರು.ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಸ್ಥಿತಿಯನ್ನು ಮನವರಿಕೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪರಿಸ್ಥಿತಿ ಹೀಗಿದ್ದರೂ ನೀರನ್ನು ಬಿಡಲಾಗಿದೆ ಎಂದು ಆರೋಪಿಸಿದರು.ಕಾಂಗ್ರೆಸ್ ಸರ್ಕಾರದ ವಿರುದ್ಧ ಮೊದಲು ಕಾವೇರಿ ಕುರಿತು ಹೋರಾಟ ನಡೆಸಲಿದ್ದು, ನಂತರ ಮತ್ತಷ್ಟು ವಿಷಯಗಳ ಮೂಲಕ ಹೋರಾಟಕ್ಕೆ ಮೈತ್ರಿ ವಿಪಕ್ಷಗಳು ಪ್ಲಾನ್ ಮಾಡಿಕೊಂಡಿವೆ ಎನ್ನಲಾಗಿದೆ.