22.7 C
Bengaluru
Monday, December 23, 2024

ಬಿಜೆಪಿ ಶಾಸಕಾಂಗ ಸಭೆ;ನಾಳೆ ವಿಪಕ್ಷ ನಾಯಕನ ಆಯ್ಕೆ

#BJP #Legislature #Election #Leader #Oppositon #Tomorow

ಬೆಂಗಳೂರು;6 ತಿಂಗಳಿಂದ ಖಾಲಿಯಿರುವ BJPಯ ವಿಪಕ್ಷ ನಾಯಕ ಹುದ್ದೆ ನಾಳೆ ಫೈನಲ್ ಆಗುವ ಸಾಧ್ಯತೆಯಿದೆ. ಈಗಾಗಲೇ BY ವಿಜಯೇಂದ್ರರನ್ನು BJP ರಾಜ್ಯಾಧ್ಯಕ್ಷರಾಗಿ ಹೈಕಮಾಂಡ್ ನೇಮಿಸಿದೆ. ಇದೀಗ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಾಳೆ ನಡೆಯಲಿರುವ BJP ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಪಕ್ಷ ನಾಯಕ ಆಯ್ಕೆ ಕುರಿತು ತೀರ್ಮಾನವಾಗಲಿದೆ. ಸಭೆಗೆ ಕೇಂದ್ರ ವೀಕ್ಷಕ ತಂಡ ಆಗಮಿಸುತ್ತಿದ್ದು, ವಿಪಕ್ಷ ನಾಯಕ(Opposition leader) ಹುದ್ದೆಗೆ ಆರ್‌.ಅಶೋಕ್‌, ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್‌ ಕುಮಾರ್ ಅವರ ಹೆಸರುಗಳು ಕೇಳಿಬರುತ್ತಿವೆ.ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸಲು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ನಾಳೆ (ನ.17) ಸಂಜೆ 6 ಗಂಟೆಗೆ ನಗರದ ಐಟಿಸಿ(ITC) ಗಾರ್ಡೇನಿಯಾ ಹೋಟೆಲ್‍ನಲ್ಲಿ ಶಾಸಕಾಂಗ ಪಕ್ಷದ ಸಭೆ ನಿಗದಿಪಡಿಸಿದ್ದು, ಪಕ್ಷದ ಎಲ್ಲ ಶಾಸಕರು ಮತ್ತು ಪರಿಷತ್ ಸದಸ್ಯರು ತಪ್ಪದೇ ಭಾಗವಹಿಸಬೇಕೆಂದು ಸೂಚಿಸಲಾಗಿದೆ.ಶಾಸಕರ ಸಭೆಗೆ ದೆಹಲಿಯಿಂದ ಹೈಕಮಾಂಡ್ ಪ್ರತಿನಿಗಳಾಗಿ ಇಬ್ಬರು ನಾಯಕರು ವೀಕ್ಷಕರಾಗಿ ಆಗಮಿಸಲಿದ್ದಾರೆ. ಯಾವ ನಾಯಕರನ್ನು ಕಳುಹಿಸಲಿದ್ದಾರೆ ಎನ್ನುವ ಮಾಹಿತಿ ಇನ್ನು ರಾಜ್ಯ ಘಟಕಕ್ಕೆ ಬಂದಿಲ್ಲ. ಬಹುತೇಕ ರಾಜ್ಯ ರಾಜಕಾರಣದ ಬಗ್ಗೆ ಹೆಚ್ಚಿನ ಮಾಹಿತಿ ಇರುವ ನಾಯಕರನ್ನೇ ಕಳುಹಿಸಿಕೊಡುವ ಸಾಧ್ಯತೆ ಇದೆ ಎಂಬುದಾಗಿ ತಿಳಿದು ಬಂದಿದೆ.ಶಾಸಕರ ಸಭೆಗೆ ದೆಹಲಿಯಿಂದ ಹೈಕಮಾಂಡ್(Highcommand) ಪ್ರತಿನಿಗಳಾಗಿ ಇಬ್ಬರು ನಾಯಕರು ವೀಕ್ಷಕರಾಗಿ ಆಗಮಿಸಲಿದ್ದಾರೆ. ಯಾವ ನಾಯಕರನ್ನು ಕಳುಹಿಸಲಿದ್ದಾರೆ ಎನ್ನುವ ಮಾಹಿತಿ ಇನ್ನು ರಾಜ್ಯ ಘಟಕಕ್ಕೆ ಬಂದಿಲ್ಲ. ಬಹುತೇಕ ರಾಜ್ಯ ರಾಜಕಾರಣದ ಬಗ್ಗೆ ಹೆಚ್ಚಿನ ಮಾಹಿತಿ ಇರುವ ನಾಯಕರನ್ನೇ ಕಳುಹಿಸಿಕೊಡುವ ಸಾಧ್ಯತೆ ಇದೆ ಎಂಬುದಾಗಿ ತಿಳಿದು ಬಂದಿದೆ.

Related News

spot_img

Revenue Alerts

spot_img

News

spot_img