Revenue Facts

ಸರ್ಕಾರದ ಗ್ಯಾರಂಟಿಗಳ ವಿರುದ್ಧಆಗ್ರಹಿಸಿ ಫ್ರೀಡಂ ಪಾರ್ಕ್​​ನಲ್ಲಿ ಬಿಜೆಪಿ ಪ್ರತಿಭಟನೆ

ಸರ್ಕಾರದ ಗ್ಯಾರಂಟಿಗಳ ವಿರುದ್ಧಆಗ್ರಹಿಸಿ  ಫ್ರೀಡಂ ಪಾರ್ಕ್​​ನಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸರ್ಕಾರದ 5 ಗ್ಯಾರಂಟಿಗಳಿಗೆ ವಿಧಿಸಿರುವ ಷರತ್ತುಗಳು, ಗೋ ಹತ್ಯೆ ಮತ್ತು ಮತಾಂತರ ಕಾಯ್ದೆಯನ್ನ ವಾಪಾಸ್ ಪಡೆಯುತ್ತಿರುವ ಬಗ್ಗೆ ವಿರೋಧಿಸಿ ಇಂದು ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.ಸದನದೊಳಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆದರೇ ಇತ್ತ ನಗರದ ಫ್ರೀಡಂ ಪಾರ್ಕ್​​ನಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​, ಮಾಜಿ ಸಿಎಂ ಡಿವಿ ಸದಾನಂದಗೌಡ​, ಮಾಜಿ ಸಚಿವರಾದ ಗೋಪಾಲಯ್ಯ, ಬಿ.ಸಿ.ನಾಗೇಶ್, ಎನ್.ಮಹೇಶ್​, ಮಾಜಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮಶೇಖರ್ ರೆಡ್ಡಿ, ಪರಿಷತ್ ಸದಸ್ಯ ಎನ್​​.ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Exit mobile version