#Bomb # Threat # private # schools # Bangalore
ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರಿನ ವಿವಿಧ 15ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್(Email)ಬೆದರಿಕೆ ಹಾಕಲಾಗಿದೆ. ಶಾಲೆಗಳ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ಮಕ್ಕಳನ್ನು ಸಿಬ್ಬಂದಿ ಹೊರ ಕಳಿಸಿದ್ದಾರೆ. ಕಳೆದೊಂದು ವರ್ಷದ ಹಿಂದೆ ಇದೇ ರೀತಿ ಬಾಂಬ್ ಬೆದರಿಕೆಯನ್ನು ಹಾಕಲಾಗಿತ್ತು. ಇನ್ನು ಯಾರೂ ಆತಂಕ ಪಡಬೇಡಿ ಎಂದು ಬೆಂಗಳೂರು ನಗರ ಕಮೀಷನರ್ ಬಿ.ದಯಾನಂದ ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ಸುದ್ದಿ ನೋಡುತ್ತಿದ್ದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸದಾಶಿವನಗರದ ನೀವ್ ಅಕಾಡೆಮಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಶಿವಕುಮಾರ್ ಅವರು ಭಯ ಪಡಬೇಡಿ, ನಮ್ಮ ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಳ್ಳಲಿದೆ ಅಂತ ಹೇಳಿರು. ಪೊಲೀಸರು ಬೆದರಿಕೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ನಗರ ಪೊಲೀಸ್ ಆಯುಕ್ತರ(Commissioner of Police)ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಅಂತ ತಿಳಿಸಿದರು.
ಪೊಲೀಸ್ ಆಯುಕ್ತ ಬಿ.ದಯಾನಂದ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಶಾಲೆಗಳಿಗೆ ಬಾಂಬ್ ಪತ್ತೆ ದಳ, ನಿಷ್ಕ್ರಿಯ ದಳವನ್ನು ಕಳಿಸಿದ್ದೇವೆ. ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಾರೆ. ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.ಇ- ಮೇಲ್ ಮೂಲಕ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ.ಬಾಂಬ್ ಬೆದರಿಕೆ ಸಂದೇಶ ತಿಳಿಯುತ್ತಿದ್ದಂತೆ ಪೋಷಕರು ಆತಂಕ ವ್ಯಕ್ತಪಡಿಸಿ ಸ್ಥಳಕ್ಕೆ ಬಂದು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಆಗಂತುಕರು ಯಾವ ಕಾರಣಕ್ಕಾಗಿ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಿದ ಬಳಿಕ ಸತ್ಯಾಂಶ ಗೊತ್ತಾಗಲಿದೆ