ಬೆಂಗಳೂರು;ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಡಿ ಉಚಿತವಾಗಿ ಅನಿಲ ಸಂಪರ್ಕ ಪಡೆಯದೇ ಅವಕಾಶ ವಂಚಿತರಾಗಿರುವ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಸಿಹಿ ಸುದ್ದಿ.ಉಚಿತ ಗ್ಯಾಸ್ ಸಿಲಿಂಡರ್ `ಉಜ್ವಲಾ ಯೋಜನೆ’ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು (PMUY) 2016 ರಲ್ಲಿ ಪ್ರಾರಂಭಿಸಲಾಯಿತು. ಬಡತನ ರೇಖೆಗಿಂತ ಕೆಳಗಿರುವ ಐದು ಕೋಟಿ ಮಹಿಳಾ ಸದಸ್ಯರಿಗೆ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಸಿಲಿಂಡರ್ (LPG) ಸಂಪರ್ಕ ಒದಗಿಸುವ ಗುರಿ ಹೊಂದಾಲಾಗಿತ್ತು. ಇದೀಗ ಉಜ್ವಲ 2.0 ಯೋಜನೆ ಚಾಲ್ತಿಯಲ್ಲಿದೆ.
ಉಜ್ವಲ ಯೋಜನೆಗೆ ಮಾನದಂಡಗಳು ಏನು?
*ಅರ್ಜಿದಾರರು ಮಹಿಳೆಯೇ ಆಗಿರಬೇಕು
*ಮಹಿಳೆಯ ವಯಸ್ಸು 18ಕ್ಕಿಂತ ಹೆಚ್ಚಿರಬೇಕು
*ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದವರಾಗಿರಬೇಕು
*ಬಿಪಿಎಲ್ ಕಾರ್ಡ್ ಮತ್ತು ಪಡಿತರಚೀಟಿಯನ್ನು ಹೊಂದಿರಬೇಕು
*ಅರ್ಜಿದಾರರ ಕುಟುಂಬದ ಸದಸ್ಯರ ಹೆಸರಿನಲ್ಲಿಯೂ ಎಲ್‌ಪಿಜಿ ಕನೆಕ್ಷನ್ ಇರಬಾರದು
ಅರ್ಜಿ ಸಲ್ಲಿಸುವುದು ಹೇಗೆ?
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಲಾಭ ಪಡೆಯಲು ಎಲ್‌ಪಿಜಿ ವಿತರಣಾ ಏಜೆನ್ಸಿಯಲ್ಲಿ ಅರ್ಜಿ ಭರ್ತಿ ಮಾಡಿ ಸಲ್ಲಿಸುವ ಮೂಲಕ ಆಫ್‌ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೋಡ್‌ನಲ್ಲಿ ಅರ್ಜಿ ಸಲ್ಲಿಸುವುದಾದರೆ ಅರ್ಜಿದಾರರು ಅಧಿಕೃತ ವೆಬ್‌ಸೈಟ್ pmujjwalayojana.com ಗೆ ಹೋಗಿ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಬಹುದು ಮತ್ತು ಈ ಫಾರ್ಮ್ ಅನ್ನು ಹತ್ತಿರದ ಎಲ್‌ಪಿಜಿ ಕೇಂದ್ರದಲ್ಲಿ ಸಲ್ಲಿಸಬೇಕು.ಅರ್ಜಿ ಸಲ್ಲಿಸುವವರು ಹೆಸರು, ವಿಳಾಸ, ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ಸಂಖ್ಯೆ ಅಪ್‌ಲೋಡ್ ಮಾಡಬೇಕು. ಗ್ರಾಹಕರು ತಮಗೆ ಬೇಕಾದ ಗ್ಯಾಸ್ ಏಜೆನ್ಸಿಗಳಿಂದ ಸಂಪರ್ಕ ಪಡೆಯಲು ತಾವೇ ಆಯ್ಕೆ ಮಾಡಿಕೊಳ್ಳಬಹುದಾಗಿದೆ.