Revenue Facts

ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ: ರಾಜಭವನಕ್ಕೆ ಅಧಿಕಾರಿಗಳ ದೂರು

ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ: ರಾಜಭವನಕ್ಕೆ ಅಧಿಕಾರಿಗಳ ದೂರು

ಬೆಂಗಳೂರು ಆ 07;ಸಿಎಂ ಸಿದ್ದರಾಮಯ್ಯ ಸಂಪುಟದ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ(Bribe) ಆರೋಪ ಮಾಡಿರುವ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ಹಾಗೂ ಸಿಬ್ಬಂದಿ ರಾಜಭವನಕ್ಕೆ ದೂರು ಸಲ್ಲಿಸಿದ್ದಾರೆ. ಮಂಡ್ಯ, ಮಳವಳ್ಳಿ, ಕೆ.ಆರ್‌ ಪೇಟೆ, ಶ್ರೀರಂಗಪಟ್ಟಣ್ಣ.ನಾಗಮಂಗಲ, ಮದ್ದೂರು. ಪಾಂಡವಪುರದ 7 ಸಹಾಯಕ ಕೃಷಿ ನಿರ್ದೇಶಕರಿಂದ ರಾಜ್ಯಪಾಲರಿಗೆ ದೂರು ನೀಡಲಾಗಿದೆ,6 ರಿಂದ 8 ಲಕ್ಷ ರೂ. ಕೊಡುವಂತೆ ಚಲುವರಾಯಸ್ವಾಮಿ ಮೇಲಾಧಿಕಾರಿಗಳ ಮೂಲಕ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಅಧಿಕಾರಿಗಳು ರಾಜಭವನಕ್ಕೆ‌ ದೂರು ಅರ್ಜಿ ಸಲ್ಲಿಸಲಾಗಿದೆ.ಲಂಚದ ಅನಿಷ್ಟ ಪದ್ದತಿಗೆ ಕಡಿವಾಣ ಹಾಕದಿದ್ದರೆ ಅಧಿಕಾರಿಗಳು ಕುಟುಂಬ ಸಮೇತ ವಿಷಕುಡಿಯುವುದಾಗಿ ದೂರಿನಲ್ಲಿ ಎಚ್ಚರಿಕೆ ನೀಡಿದ್ದಾರೆ.ರಾಜ್ಯಪಾಲರ ಅಧೀನ‌ ಕಾರ್ಯದರ್ಶಿಯಿಂದ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆಯಲಾಗಿದೆ. ಈ ಪತ್ರದ ಬಗ್ಗೆ ಕ್ರಮವಹಿಸುವಂತೆ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.ರಾಜಭವನಕ್ಕೆ ತಮ್ಮ ವಿರುದ್ಧ ದೂರು ನೀಡಿರುವ ಕುರಿತು ಪ್ರತಿಕ್ರಿಯಿಸಿರುವ, ಕೃಷಿ ಸಚಿವ ಚಲುವರಾಯಸ್ವಾಮಿ, ಲೆಟರ್ ಬಗ್ಗೆ ನನಗೆ ಗೊತ್ತಿಲ್ಲ. ಜೆಡಿ ಬಳಿ ಕೇಳಿದಾಗ ಫೇಕ್ ಲೆಟರ್ ಎಂದಿದ್ದಾರೆ. ಆದರೂ ಈ ಬಗ್ಗೆ ಸತ್ಯಾಸತ್ಯತೆ ತಿಳಿದು ತನಿಖೆಗೆ ಸೂಚಿಸುತ್ತೇನೆ ಎಂದು ಹೇಳಿದ್ದಾರೆ.

Exit mobile version