26.4 C
Bengaluru
Wednesday, December 4, 2024

PSI ನೇಮಕಾತಿ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಸಂಕ್ಷಿಪ್ತ ಸೂಚನೆಗಳು ಮತ್ತು ವೇಳಾಪಟ್ಟಿ

ಬೆಂಗಳೂರು ಜ 08:ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (PSI) ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ (State Government) ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ (Karnataka High court) ಗ್ರೀನ್‌ ಸಿಗ್ನಲ್‌ ನೀಡಿದ್ದ ಬೆನ್ನಲ್ಲೇ ಡಿ.23ಕ್ಕೆ ಪಿಎಸ್ಐ ಮರು‌ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಘೋಷಣೆ ಮಾಡಲಾಗಿತ್ತು.ಆದರೆ, ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ದಿನಾಂಕ ಮುಂದೂಡಬೇಕೆಂಬ ಕೂಗುಗಳು ಕೇಳಿಬಂದಿದ್ದವು. ಜ. 23ಕ್ಕೆ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಘೋಷಣೆ ಮಾಡಲಾಯಿತು,ಸರ್ಕಾರದ ಆದೇಶ ಸಂಖ್ಯೆ ಒಇ 73 ಪಿಇಐ 2022 ಬೆಂಗಳೂರು 13-11-2023 ರಲ್ಲಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ನೇರ ನೇಮಕಾತಿಯ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಸಂಕ್ಷಿಪ್ತ ಸೂಚನೆಗಳು ಮತ್ತು ವೇಳಾಪಟ್ಟಿ ಈ ಕೆಳಗೆ ನೀಡಲಾಗಿದೆ.

ಪಿಎಸ್‌ಐ(PSI) ಮರು ಪರೀಕ್ಷೆ ವೇಳಾಪಟ್ಟಿ;ದಿನಾಂಕ 23-01-2024 ಮಂಗಳವಾರ, ಸಮಯ 10.30 to 12.00,Paper-1 50-ಅಂಕಗಳು,Paper-2 ಮಧ್ಯಾಹ್ನ1.to 2.30 150 ಅಂಕಗಳು,

ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಸಂಕ್ಷಿಪ್ತ ಸೂಚನೆಗಳು

•ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಿದೆ.

•ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಅಂದರೆ, ಡ್ರೈವಿಂಗ್ ಲೈಸೆನ್ಸ್,/ ಪಾಸ್‌ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ / ಮತದಾರರ ಗುರುತಿನ ಚೀಟಿ ಹಾಜರುಪಡಿಸಿದರೆ ಮಾತ್ರ ಅಭ್ಯರ್ಥಿಯನ್ನು ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಬಿಡಲಾಗುವುದು.

* ಮೊಬೈಲ್ ಗಳನ್ನು ನಿಷೇಧಿಸಲಾಗಿದ್ದು, ಮೊಬೈಲ್ ನಲ್ಲಿ ಗುರುತಿನ ಚೀಟಿಯನ್ನು ತೋರಿಸುವಂತಿಲ್ಲ ಮತ್ತು ಅಂತಹ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡುವುದಿಲ್ಲ.

•ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್‌ಗಳು ಇಲ್ಲದೆ ಇರುವ ಶರಟುಗಳನ್ನು ಹಾಕಿಕೊಳ್ಳುವುದು.

• ಯಾವುದೇ ತೆರನಾದ ಜೀನ್ಸ್ ಪ್ಯಾಂಟ್, ಬೆಲ್ಟ್, ಶೂ ಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ಇರುವದಿಲ್ಲ

• ಕಿವಿ ಅಥವಾ ಬಾಯಿಯನ್ನು ಮುಚ್ಚಿಕೊಳ್ಳುವಂತಹದನ್ನು ಧರಿಸಿ ಅಥವಾ ಯಾವುದೇ ರೀತಿಯ ಫೇಸ್ ಮಾಸ್ಕ್ ಅನ್ನೂ ಸಹ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ.

• ವಾಟರ್ ಬಾಟಲ್ ಗಳನ್ನು ಅನುಮತಿಸುವುದಿಲ್ಲ. ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು

•ಮೊದಲನೆ ಅವಧಿ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಗೆ ಹೋಗಲು

•ಕಾಲ ಕಾಲಕ್ಕೆ ಪ್ರಾಧಿಕಾರದ ವೆಬ್ ಸೈಟಿನಲ್ಲಿ ಪ್ರಕಟಿಸಲಾಗುವ ಸೂಚನೆಗಳನ್ನು ಅಭ್ಯರ್ಥಿಗಳು ತಪ್ಪದೆ ಪಾಲಿಸತಕ್ಕದ್ದು,,

Related News

spot_img

Revenue Alerts

spot_img

News

spot_img